ಅಲ್ಲು ಅರ್ಜುನ್ ಬಂಧಿಸಿ ಕರೆದೊಯ್ದ ಪೊಲೀಸರು: ವಿಡಿಯೋ ಇಲ್ಲಿದೆ

Updated on: Dec 13, 2024 | 1:39 PM

Allu Arjun: ತೆಲುಗು ಚಿತ್ರರಂಗದ ಸ್ಟಾರ್ ಹೀರೋ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 04 ರಂದು ರಾತ್ರಿ ಅಲ್ಲು ಅರ್ಜುನ್, ಹೈದರಾಬಾದ್​ನ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದಾಗ ನಡೆದ ಕಾಲ್ತುಳಿತದಲ್ಲಿ ರೇವತಿ ಹೆಸರಿನ ಮಹಿಳೆ ನಿಧನ ಹೊಂದಿದ್ದರು.

ತೆಲುಗು ಚಿತ್ರರಂಗದ ಸ್ಟಾರ್ ಹೀರೋ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 04 ರಂದು ರಾತ್ರಿ ಅಲ್ಲು ಅರ್ಜುನ್, ಹೈದರಾಬಾದ್​ನ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದಾಗ ನಡೆದ ಕಾಲ್ತುಳಿತದಲ್ಲಿ ರೇವತಿ ಹೆಸರಿನ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ಸಹ ತೀವ್ರವಾಗಿ ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅನ್ನು ಇಂದು ಬೆಳಿಗ್ಗೆ ಹೈದರಾಬಾದ್​ನ ಚೀಕಡಪಲ್ಲಿ ಪೊಲೀಸರು ಅವರ ಮನೆಯಿಂದ ಬಂಧಿಸಿ ಕರೆದೊಯ್ದಿದ್ದಾರೆ. ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿ ಕರೆದೊಯ್ದ ವಿಡಿಯೋ ಇಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More