ಕೆಲವೇ ದಿನಗಳ ಹಿಂದೆ ಬೆಂಗಳೂರಿನಲ್ಲಿ ‘ಸೈಮಾ’ ಅವಾರ್ಡ್ಸ್ (SIIMA Awards 2022) ಸಮಾರಂಭ ಜರುಗಿತು. ದಕ್ಷಿಣ ಭಾರತದ ಸಿನಿಮಾಗಳಿಗೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಯಿತು. ಅದ್ದೂರಿಯಾಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುಗಿದ ಬಳಿಕ ಪಾರ್ಟಿ (SIIMA Party) ಆಯೋಜಿಸಲಾಗಿತ್ತು. ಆ ಪಾರ್ಟಿಯಲ್ಲಿ ಕನ್ನಡ, ತೆಲುಗು, ಹಿಂದಿ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ನಟ ಅಲ್ಲು ಅರ್ಜುನ್ (Allu Arjun) ಕೂಡ ಈ ಪಾರ್ಟಿಗೆ ಬಂದು ಕುಣಿದು ಕುಪ್ಪಳಿಸಿದರು. ಆ ಮೂಲಕ ಅವರು ಎಲ್ಲರನ್ನೂ ಹುರಿದುಂಬಿಸಿದರು. ಅವಧಿ ಮೀರಿ ಪಾರ್ಟಿ ಮಾಡಿದ್ದಕ್ಕಾಗಿ ಆಯೋಜಕರ ವಿರುದ್ಧ ಕೇಸ್ ದಾಖಲಿಸಲಾಗಿದೆ.