ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ

Updated on: Jul 28, 2026 | 6:43 PM

Allu Arjun movie: ಲವಾರು ಮಂದಿ ಅಲ್ಲು ಅರ್ಜುನ್ ಅವರಿಗಾಗಿ ವಿಶೇಷ ಉಡುಗೊರೆಗಳನ್ನು ಸಹ ತಂದಿದ್ದರು. ಅವರಲ್ಲಿ ಒಬ್ಬರು ತಮ್ಮ ಊರಿನ ವಿಶೇಷವೆಂದು ದೇವತೆಗಳ ‘ಬಾಗಿನ’ ರೀತಿಯ ಉಡುಗೊರೆಯೊಂದನ್ನು ತಂದಿದ್ದ. ಈ ಉಡುಗೊರೆ ಸ್ವೀಕರಿಸುವ ಮುನ್ನ ನಟ ಅಲ್ಲು ಅರ್ಜುನ್ ತಾವು ಧರಿಸಿದ್ದ ಶೂಗಳನ್ನು ತೆಗೆದು ಉಡುಗೊರೆ ಸ್ವೀಕರಿಸಿದರು. ಅಲ್ಲು ಅರ್ಜುನ್ ಅವರ ಈ ಕಾರ್ಯಕ್ಕೆ ಇದೀಗ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ನಟ ಅಲ್ಲು ಅರ್ಜುನ್ (Allu Arjun) ತಮ್ಮ ಅಭಿಮಾನಿಗಳ ಸಮಾವೇಶದಲ್ಲಿ ಭಾಗಿ ಆಗಿದ್ದರು. ಎಎಎಫ್​​ಎ (ಅಲ್ಲು ಅರ್ಜುನ್ ಫ್ಯಾನ್ಸ್ ಅಸೋಸಿಯೇಷನ್) ವತಿಯಿಂದ ಈ ಸಮಾವೇಶ ಆಯೋಜಿಸಲಾಗಿತ್ತು. ನಟ ಅಲ್ಲು ಅರ್ಜುನ್ ಅವರು ಸಮಾವೇಶದಲ್ಲಿ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಹಲವಾರು ಮಂದಿ ಅಲ್ಲು ಅರ್ಜುನ್ ಅವರಿಗಾಗಿ ವಿಶೇಷ ಉಡುಗೊರೆಗಳನ್ನು ಸಹ ತಂದಿದ್ದರು. ಅವರಲ್ಲಿ ಒಬ್ಬರು ತಮ್ಮ ಊರಿನ ವಿಶೇಷವೆಂದು ದೇವತೆಗಳ ‘ಬಾಗಿನ’ ರೀತಿಯ ಉಡುಗೊರೆಯೊಂದನ್ನು ತಂದಿದ್ದ. ಈ ಉಡುಗೊರೆ ಸ್ವೀಕರಿಸುವ ಮುನ್ನ ನಟ ಅಲ್ಲು ಅರ್ಜುನ್ ತಾವು ಧರಿಸಿದ್ದ ಶೂಗಳನ್ನು ತೆಗೆದು ಉಡುಗೊರೆ ಸ್ವೀಕರಿಸಿದರು. ಅಲ್ಲು ಅರ್ಜುನ್ ಅವರ ಈ ಕಾರ್ಯಕ್ಕೆ ಇದೀಗ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More