AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ

ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ

ರಾಜೇಶ್ ದುಗ್ಗುಮನೆ
|

Updated on: Nov 24, 2026 | 1:31 PM

Share

ಕನ್ನಡ ಚಿತ್ರರಂಗದ ರೆಬೆಲ್ ಸ್ಟಾರ್ ಹಾಗೂ ಕಲಿಯುಗದ ಕರ್ಣ ದಿವಂಗತ ಡಾ. ಅಂಬರೀಷ್ ಅವರ 8ನೇ ಪುಣ್ಯಸ್ಮರಣೆಯನ್ನು ಇಂದು ಭಕ್ತಿ ಭಾವದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಹೂವುಗಳಿಂದ ಅಲಂಕೃತಗೊಂಡ ಅಂಬಿ ಸ್ಮಾರಕಕ್ಕೆ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಹಾಗೂ ಸಾವಿರಾರು ಅಭಿಮಾನಿಗಳು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಕನ್ನಡ ಚಿತ್ರರಂಗದ ‘ರೆಬೆಲ್ ಸ್ಟಾರ್’, ‘ಕಲಿಯುಗದ ಕರ್ಣ’ ಎಂದೇ ಖ್ಯಾತರಾಗಿದ್ದ ದಿವಂಗತ ಡಾ. ಅಂಬರೀಷ್ ಅವರ 8ನೇ ಪುಣ್ಯಸ್ಮರಣೆಯನ್ನು ಅಭಿಮಾನಿಗಳು ಹಾಗೂ ಕುಟುಂಬಸ್ಥರು ಭಕ್ತಿ ಮತ್ತು ಭಾವಪೂರ್ಣವಾಗಿ ಆಚರಿಸುತ್ತಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಡಾ. ಅಂಬರೀಷ್ ಅವರ ಸ್ಮಾರಕ ಹಾಗೂ ಪುತ್ತಳಿಯನ್ನು ಇಂದು ಮುಂಜಾನೆಯಿಂದಲೇ ವಿವಿಧ ಬಗೆಯ ಬಣ್ಣಬಣ್ಣದ ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿದೆ.

ಪುಣ್ಯಸ್ಮರಣೆಯ ಅಂಗವಾಗಿ ಅಂಬರೀಷ್ ಅವರ ಪತ್ನಿ ಸುಮಲತಾ ಅಂಬರೀಷ್ ಹಾಗೂ ಪುತ್ರ ಅಭಿಷೇಕ್ ಅಂಬರೀಷ್ ಅವರು ಕಂಠೀರವ ಸ್ಟುಡಿಯೋಗೆ ಆಗಮಿಸಿ, ಅಂಬಿ ಸಮಾಧಿ ಮತ್ತು ಪುತ್ತಳಿಗೆ ವಿಶೇಷ ಪೂಜೆ ಸಲ್ಲಿಸಿ ನಮನ ಅರ್ಪಿಸಿದರು. ತಮ್ಮ ನೆಚ್ಚಿನ ನಾಯಕನ 8ನೇ ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಅಭಿಮಾನಿಗಳು ಕಂಠೀರವ ಸ್ಟುಡಿಯೋದತ್ತ ಆಗಮಿಸುತ್ತಿದ್ದಾರೆ. ಸ್ಮಾರಕದ ಮುಂದೆ ಸಾಲುಗಟ್ಟಿ ನಿಂತು ‘ಕಲಿಯುಗದ ಕರ್ಣ’ನಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ನೆಚ್ಚಿನ ನಟನನ್ನು ಸ್ಮರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More