ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ: ತಪ್ಪಿದ ಭಾರಿ ಅನಾಹುತ

Updated on: Jun 04, 2026 | 9:12 AM

ನೆಲಮಂಗಲ ತಾಲೂಕಿನ ಕುಣಿಗಲ್ ಬೈಪಾಸ್ ಬಳಿ ಕ್ಯಾಂಟರ್ಗೆ ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಹಾಸನದಿಂದ ಬೆಂಗಳೂರಿಗೆ ಬರುತ್ತಿದ್ದ ಈ ಆ್ಯಂಬುಲೆನ್ಸ್ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯರ ನೆರವಿನಿಂದ ರೋಗಿಯನ್ನು ಸುರಕ್ಷಿತವಾಗಿ ಬೇರೆ ವಾಹನಕ್ಕೆ ಸ್ಥಳಾಂತರಿಸಲಾಗಿದೆ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆಲಮಂಗಲ, ಜೂನ್​​ 04: ತಾಲೂಕಿನ ಕುಣಿಗಲ್ ಬೈಪಾಸ್ ಬಳಿ ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಹಾಸನ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಈ ಆ್ಯಂಬುಲೆನ್ಸ್ ಮಾರ್ಗಮಧ್ಯೆ ಕ್ಯಾಂಟರ್ಗೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಅದೃಷ್ಟವಶಾತ್​​ ಆ್ಯಂಬುಲೆನ್ಸ್ನಲ್ಲಿದ್ದ ರೋಗಿ ಹಾಗೂ ಚಾಲಕ ಸೇರಿ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯ ತೀವ್ರತೆ ಗಮನಿಸಿದರೆ, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಇನ್ನು ಅಪಘಾತದ ನಡೆದ ಕ್ಷಣಮಾತ್ರದಲ್ಲಿ ಸ್ಥಳೀಯರು ನೆರವಿಗೆ ಧಾವಿಸಿದ್ದು, ಆ್ಯಂಬುಲೆನ್ಸ್‌ನಲ್ಲಿದ್ದ ರೋಗಿಯನ್ನು ಸುರಕ್ಷಿತವಾಗಿ ಬೇರೆ ವಾಹನಕ್ಕೆ ಸ್ಥಳಾಂತರಿಸಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಅಪಘಾತದ ತೀವ್ರತೆಗೆ ಆ್ಯಂಬುಲೆನ್ಸ್​​ ಮುಭಾಂಗ ಸಂಪೂರ್ಣ ಜಖಂ ಆಗಿದ್ದು, ಕ್ಯಾಂಟರ್​​ಗೂ ಅಲ್ಪ ಪ್ರಮಾಣದ ಡ್ಯಾಮೇಜ್​​ ಆಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More