ಆ್ಯಂಬುಲೆನ್ಸ್ನಲ್ಲೇ ಡ್ರಗ್ಸ್ ದಂಧೆ: ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಎಸ್ಕೇಪ್
ಸಮಾಜ ಸೇವೆ ಮಾಡುವುದಾಗಿ ಬಿಂಬಿಸಿಕೊಂಡು ಆ್ಯಂಬುಲೆನ್ಸ್ ಬಳಸಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಜಲೀಲ್ ಬಾಬಾ ಪ್ರಸ್ತುತ ನಾಪತ್ತೆಯಾಗಿದ್ದಾನೆ. ಪೊಲೀಸರ ತನಿಖೆ ಬೆನ್ನಲ್ಲೇ ಜಲೀಲ್ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜೂನ್ 25ರಂದು ಅಣ್ಣಪ್ಪಸ್ವಾಮಿ ಅಲಿಯಾಸ್ ಮನುವನ್ನು ಎಂಡಿಎಂಎ ಸಮೇತ ಬಂಧಿಸಲಾಗಿತ್ತು. ಈತನ ವಿಚಾರಣೆ ನಡೆಸಿದಾಗ ಬಾಗಲಕೋಟೆ ಲಿಂಕ್ ಬಹಿರಂಗಗೊಂಡಿತು. ಇದರ ಜಾಡು ಹಿಡಿದು ಹೋದಾಗ, ಜಲೀಲ್ ಬಾಬಾ ತನ್ನ ಆ್ಯಂಬುಲೆನ್ಸ್ ಅನ್ನು ಡ್ರಗ್ಸ್ ಸಾಗಾಟಕ್ಕೆ ಬಳಸುತ್ತಿರುವುದು ಬೆಳಕಿಗೆ ಬಂದಿದೆ
ಮಂಗಳೂರು, ಜುಲೈ 26: ಮಂಗಳೂರಿನಲ್ಲಿ ಸಮಾಜ ಸೇವೆ ಮಾಡುವುದಾಗಿ ಬಿಂಬಿಸಿಕೊಂಡಿದ್ದ ವ್ಯಕ್ತಿಯೋವರ್ವ ಆ್ಯಂಬುಲೆನ್ಸ್ನಲ್ಲೇ ಡ್ರಗ್ಸ್ ದಂಧೆ ಮಾಡುತ್ತಿದ್ದ ವಿಚಾರ ಬಹಿರಂಗಗೊಂಡಿದೆ. ಜಲೀಲ್ ಬಾಬಾ ಎಂಬಾತ ಆರೋಪಿಯಾಗಿದ್ದು, ಈತ ತನ್ನ ಆ್ಯಂಬುಲೆನ್ಸ್ ಅನ್ನೇ ಡ್ರಗ್ ಪೂರೈಕೆಯ ಅಡ್ಡೆ ಮಾಡಿಕೊಂಡಿದ್ದ ಎಂಬುದು ಗೊತ್ತಾಗಿದೆ. ಜೂನ್ 25ರಂದು ಮಂಗಳೂರಿನಲ್ಲಿ ಅಣ್ಣಪ್ಪ ಸ್ವಾಮಿ ಆಲಿಯಾಸ್ ಮನು ಎಂಬಾತನನ್ನು ಎಂಡಿಎಂಎ ಸಹಿತ ಬಂಧಿಸಲಾಗಿತ್ತು. ಈ ವೇಳೆ ಪೊಲೀಸರಿಗೆ ಬಾಗಲಕೋಟೆಯ ಡ್ರಗ್ ಲಿಂಕ್ ಬಗ್ಗೆ ಮಾಹಿತಿ ದೊರೆತಿತ್ತು. ಹೀಗಾಗಿ ಜುಲೈ 15ರಂದು ಬಾಗಲಕೋಟೆಯ ಲಾಡ್ಜ್ ಮೇಲೆ ದಾಳಿ ನಡೆಸಿದ್ದ ಮಂಗಳೂರು ಸಿಸಿಬಿ ಪೊಲೀಸರು, ಅಲ್ಲಿ ಮೂವರನ್ನು ಬಂಧಿಸಿ ಐದು ಕೋಟಿ ಮೌಲ್ಯದ ಐದು ಕೆಜಿ ಡ್ರಗ್ಸ್ ವಶ ಪಡಿಸಿಕೊಂಡಿದ್ದರು. ಈ ವೇಳೆ ಬೆಳ್ತಂಗಡಿಯ ಮಹಮ್ಮದ್ ಅಲ್ಫಾಜ್, ಮಹಮ್ಮದ್ ಮುಸ್ತಾಫಾ ಅರೆಸ್ಟ್ ಆಗಿದ್ದರು. ಬಂಧಿತ ಮೂವರು ಲೋಕಲ್ ಪೆಡ್ಲರ್ ಜಲೀಲ್ ಬಾಬಾಗೆ ಡ್ರಗ್ಸ್ ಒದಗಿಸುತ್ತಿದ್ದ ಬಗ್ಗೆ ಸ್ಪೋಟಕ ಮಾಹಿತಿ ತನಿಖೆ ವೇಳೆ ಲಭ್ಯವಾಗಿದ್ದು, ಸದ್ಯ ಬಂಧಿತರ ಬಗ್ಗೆ ಮಂಗಳೂರು ಕೋರ್ಟ್ಗೆ ಪೊಲೀಸರು ವರದಿ ನೀಡಿದ್ದಾರೆ. ಕಳೆದ ಎಂಟು ದಿನಗಳಿಂದ ಮೊಬೈಲ್ ಸ್ವಿಚ್ಚ್ ಆಫ್ ಮಾಡಿಕೊಂಡು ಆ್ಯಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಎಸ್ಕೇಪ್ ಆಗಿರೋ ಬಗ್ಗೆಯೂ ಮಾಹಿತಿ ನೀಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

