ರಸ್ತೆ ಬದಿ ವಾಲಿದ ನಕ್ಸಲ್ ವಿಕ್ರಂಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್
ನಕ್ಸಲ್ ನಾಯಕ ವಿಕ್ರಂಗೌಡ ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ವಾಲಿದೆ. ರಾಷ್ಟ್ರೀಯ ಹೆದ್ದಾರಿ 169Aಯಲ್ಲಿ ಘಟನೆ ನಡೆದಿದೆ. ಕೂಡಲೆ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಆ್ಯಂಬುಲೆನ್ಸ್ ಮೇಲಕ್ಕೆ ಎತ್ತಿದ್ದಾರೆ.
ಉಡುಪಿ, ನವೆಂಬರ್ 20: ನಕ್ಸಲ್ ನಾಯಕ ವಿಕ್ರಂಗೌಡ (Vikram Gowda) ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ (Ambulance) ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ವಾಲಿದೆ. ರಾಷ್ಟ್ರೀಯ ಹೆದ್ದಾರಿ 169Aಯಲ್ಲಿ ಘಟನೆ ನಡೆದಿದೆ. ವೇಗವಾಗಿ ಹೋಗುತ್ತಿದ್ದ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಗೆ ಹೋಗಿದೆ. ರಸ್ತೆ ಬದಿಯಲ್ಲಿದ್ದ ಗುಡಿಯೊಳೊಗೆ ವಾಲಿಕೊಂಡು ನಿಂತಿದೆ. ಕೂಡಲೆ ಸ್ಥಳದಲ್ಲಿದ್ದ ಜನರು ಧಾವಿಸಿ, ಆ್ಯಂಬುಲೆನ್ಸ್ ಅನ್ನು ಮೇಲಕ್ಕೆ ಎತ್ತಿದ್ದಾರೆ. ಬಳಿಕ, ಆ್ಯಂಬುಲೆನ್ಸ್ ವಿಕ್ರಂಗೌಡ ಮೃತದೇಹ ಹೊತ್ತು ಸಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Nov 20, 2024 01:22 PM
Latest Videos