ರಸ್ತೆ ಬದಿ ವಾಲಿದ ನಕ್ಸಲ್​ ವಿಕ್ರಂಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್

Edited By:

Updated on: Nov 20, 2024 | 1:22 PM

ನಕ್ಸಲ್ ನಾಯಕ ವಿಕ್ರಂಗೌಡ ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ವಾಲಿದೆ. ರಾಷ್ಟ್ರೀಯ ಹೆದ್ದಾರಿ 169Aಯಲ್ಲಿ ಘಟನೆ ನಡೆದಿದೆ. ಕೂಡಲೆ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಆ್ಯಂಬುಲೆನ್ಸ್​ ಮೇಲಕ್ಕೆ ಎತ್ತಿದ್ದಾರೆ.

ಉಡುಪಿ, ನವೆಂಬರ್​ 20: ನಕ್ಸಲ್ ನಾಯಕ ವಿಕ್ರಂಗೌಡ (Vikram Gowda) ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ (Ambulance) ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ವಾಲಿದೆ. ರಾಷ್ಟ್ರೀಯ ಹೆದ್ದಾರಿ 169Aಯಲ್ಲಿ ಘಟನೆ ನಡೆದಿದೆ. ವೇಗವಾಗಿ ಹೋಗುತ್ತಿದ್ದ ಆ್ಯಂಬುಲೆನ್ಸ್​​ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಗೆ ಹೋಗಿದೆ. ರಸ್ತೆ ಬದಿಯಲ್ಲಿದ್ದ ಗುಡಿಯೊಳೊಗೆ ವಾಲಿಕೊಂಡು ನಿಂತಿದೆ. ಕೂಡಲೆ ಸ್ಥಳದಲ್ಲಿದ್ದ ಜನರು ಧಾವಿಸಿ, ಆ್ಯಂಬುಲೆನ್ಸ್​ ಅನ್ನು ಮೇಲಕ್ಕೆ ಎತ್ತಿದ್ದಾರೆ. ಬಳಿಕ, ಆ್ಯಂಬುಲೆನ್ಸ್​ ವಿಕ್ರಂಗೌಡ ಮೃತದೇಹ ಹೊತ್ತು ಸಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Nov 20, 2024 01:22 PM
Follow Us
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More