ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ: ಪ್ರತ್ಯೇಕ ಲೇನ್‌ಗೆ ಹೆಚ್ಚಿದ ಒತ್ತಾಯ

Edited By:

Updated on: Sep 11, 2026 | 1:14 PM

ದೇವರಹಳ್ಳಿ ಬಳಿಯ ಕೆಂಪೇಗೌಡ ಏರ್‌ಪೋರ್ಟ್ ಟೋಲ್ ಪ್ಲಾಜಾದಲ್ಲಿ ಆ್ಯಂಬುಲೆನ್ಸ್ ಸೇರಿದಂತೆ ತುರ್ತು ವಾಹನಗಳಿಗೆ ಪ್ರತ್ಯೇಕ ಲೇನ್ ಇಲ್ಲದ ಕಾರಣ ರೋಗಿಗಳು ಹಾಗೂ ಚಾಲಕರು ನಿತ್ಯ ಪರದಾಡುತ್ತಿದ್ದಾರೆ. ವಿಐಪಿ ವಾಹನಗಳ ಲೇನ್‌ನಲ್ಲಿ ಸಂಚರಿಸಬೇಕಾದ ಅನಿವಾರ್ಯತೆಯಿಂದ ಅಪಘಾತಗಳು ಸಂಭವಿಸುತ್ತಿದ್ದು, ಪ್ರತ್ಯೇಕ ಲೇನ್ ವ್ಯವಸ್ಥೆ ಮಾಡುವಂತೆ ಆಕ್ರೋಶ ವ್ಯಕ್ತವಾಗಿದೆ.

ದೇವನಹಳ್ಳಿ, ಸೆಪ್ಟೆಂಬರ್​​ 11: ಕೆಂಪೇಗೌಡ ಏರ್‌ಪೋರ್ಟ್ ಟೋಲ್ ಪ್ಲಾಜಾದಲ್ಲಿ ಆ್ಯಂಬುಲೆನ್ಸ್ ಸೇರಿದಂತೆ ತುರ್ತು ವಾಹನಗಳಿಗೆ ಪ್ರತ್ಯೇಕ ಲೇನ್ ಇಲ್ಲದ ಕಾರಣ ಗಂಭೀರ ಸಮಸ್ಯೆಗಳು ಎದುರಾಗಿವೆ. ಸರ್ಕಾರ ತುರ್ತು ಸಂದರ್ಭಗಳಲ್ಲಿ ಸೇವೆಗೆ ಬರುವ ವಾಹನಗಳಿಗೆ ವಿನಾಯಿತಿ ನೀಡಿದ್ದರೂ, ಈ ಟೋಲ್ ಪ್ಲಾಜಾದಲ್ಲಿ ಆ್ಯಂಬುಲೆನ್ಸ್‌ಗಳಿಗೆ ಸೂಕ್ತ ಮಾರ್ಗ ವ್ಯವಸ್ಥೆ ಇಲ್ಲ. ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಚಿಂತಾಮಣಿ, ಶಿಡ್ಲಘಟ್ಟ ಸೇರಿದಂತೆ ಹಲವು ಕಡೆಗಳಿಂದ ಬರುವ ಆ್ಯಂಬುಲೆನ್ಸ್‌ಗಳು ರೋಗಿಗಳನ್ನು ಹೊತ್ತು ಯಲಹಂಕ ಹಾಗೂ ಬೆಂಗಳೂರಿನ ಆಸ್ಪತ್ರೆಗಳಿಗೆ ಸಾಗಲು ಈ ಟೋಲ್ ಪ್ಲಾಜಾ ಮೂಲಕ ಹಾದುಹೋಗುತ್ತವೆ. ಆದರೆ, ಟೋಲ್ ಸಿಬ್ಬಂದಿ ಆ್ಯಂಬುಲೆನ್ಸ್‌ಗಳಿಗೆ ಸರಿಯಾಗಿ ದಾರಿ ಮಾಡಿಕೊಡುತ್ತಿಲ್ಲ. ಪ್ರತಿದಿನ ವಿಐಪಿ ವಾಹನಗಳ ಸಂಖ್ಯೆ ಹೆಚ್ಚಿರುವುದರಿಂದ, ಆ್ಯಂಬುಲೆನ್ಸ್‌ಗಳು ಸಹ ವಿಐಪಿ ಲೇನ್‌ನಲ್ಲಿಯೇ ಸಾಗಬೇಕಾಗಿದೆ. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿ, ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ಸಿಗದೆ ಜೀವಕ್ಕೆ ಅಪಾಯ ಎದುರಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಪೊಲೀಸರು ಈ ಬಗ್ಗೆ ಕೂಡಲೇ ಗಮನಹರಿಸಿ ಆ್ಯಂಬುಲೆನ್ಸ್‌ಗಳಿಗೆ ಪ್ರತ್ಯೇಕ ಲೇನ್ ವ್ಯವಸ್ಥೆ ಮಾಡುವಂತೆ ಚಾಲಕರು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 11, 2026 01:14 PM
Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More