‘ಅಮೆರಿಕಾ ಅಮೆರಿಕಾ 2’ ವೇದಿಕೆ ಮೇಲೆ ‘ಯಾವ ಮೋಹನ’ ಹಾಡಿನ ಬಗ್ಗೆ ನಾಗತಿಹಳ್ಳಿ ಮಾತು

Updated on: Aug 14, 2026 | 8:55 AM

‘ಅಮೆರಿಕಾ ಅಮೆರಿಕಾ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ಸೀಕ್ವೆಲ್ ಬರುತ್ತಿದೆ. ಈ ಚಿತ್ರವೂ ವಿದೇಶದಲ್ಲಿ ಶೂಟ್ ಆಗಿದೆ. ಇಲ್ಲಿಯೂ ಮುಖ್ಯಭೂಮಿಕೆಯಲ್ಲಿ ಮೂವರಿದ್ದಾರೆ. ಇದು ಕೂಡ ಟ್ರಯಾಂಗಲ್ ಲವ್ ಸ್ಟೋರಿ ಎನ್ನಲಾಗುತ್ತಿದೆ. ಹೀಗಿರುವಾಗಲೇ ಸೀಕ್ವೆಲ್ ಸಿನಿಮಾದ ಪ್ರೆಸ್​ಮೀಟ್​ನಲ್ಲಿ ನಡೆದ ಚರ್ಚೆಗೆ ಕಾರಣ ಆಗಿದೆ.

‘ಅಮೆರಿಕಾ ಅಮೆರಿಕಾ 2’ ಚಿತ್ರ ಸಿದ್ಧವಾಗಿದೆ. ಅಮೆರಿಕಾ ಅಮೆರಿಕಾ ಹಿಟ್ ಆದ ಬಳಿಕ ತೆರೆಗೆ ಬರುತ್ತಿರುವ ಸಿನಿಮಾ ಇದು. ಈ ಚಿತ್ರವನ್ನು ನಾಗತಿಹಳ್ಳಿ ಚಂದ್ರಶೇಖರ್ ಅವರೇ ನಿರ್ದೇಶನ ಮಾಡಿದ್ದಾರೆ. ಅವರು ಮೊದಲ ಚಿತ್ರದ ಹಾಡಿನ ಬಗ್ಗೆ ಮಾತನಾಡಿದ್ದಾರೆ. ‘ಯಾವ ಮೋಹನ ಹಾಡು ಬೇರೆ ಬೇರೆ ಅರ್ಥವನ್ನು ಕೊಡುವ ಗೀತೆ. ಅದನ್ನು ಗೋಪಾಲಕೃಷ್ಣ ಅಡಿಗರು ನನಗೆ ಬೇಕಾಗಬಹುದು ಎಂಬ ರೀತಿ ಬರೆದಿಟ್ಟು ಹೋದಂತೆ ಇದೆ. ನೂರು ಜನ್ಮಕೂ ಹಿಟ್ ಆದಷ್ಟೇ ಯಾವ ಮೋಹನ ಹಾಡು ಹಿಟ್ ಆಗಿತ್ತು’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More