ಸರಿಗಮಪ ವೇದಿಕೆ ಮೇಲೆ ಒಂದಾದ ‘ಅಮೆರಿಕ ಅಮೆರಿಕ’ ಚಿತ್ರದ ಸೂರ್ಯ-ಭೂಮಿ

Updated on: Mar 06, 2025 | 9:00 AM

1997ರಲ್ಲಿ ರಿಲೀಸ್ ಆದ ‘ಅಮೆರಿಕ ಅಮೆರಿಕ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಆಗಿನ ಕಾಲದಲ್ಲಿ ಸಾಕಷ್ಟು ಸದ್ದು ಮಾಡಿದ ಚಿತ್ರ ಇದು. ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್, ಹೇಮಾ ಪಂಚಮುಖಿ ಕಾಣಿಸಿಕೊಂಡಿದ್ದರು. ಈ ಜೋಡಿ ವೇದಿಕೆ ಮೇಲೆ ಒಂದಾಗಿದ್ದಾರೆ.

1997ರಲ್ಲಿ ರಿಲೀಸ್ ಆದ ‘ಅಮೆರಿಕ ಅಮೆರಿಕ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಚಿತ್ರದಲ್ಲಿ ಸೂರ್ಯ (ರಮೇಶ್ ಅರವಿಂದ್) ಹಾಗೂ ಭೂಮಿ (ಹೇಮಾ) ಒಂದಾಗುವುದೇ ಇಲ್ಲ. ಈಗ ಜೀ ಕನ್ನಡದ ‘ಸರಿಗಮಪ’ ವೇದಿಕೆ ಮೇಲೆ ಇಬ್ಬರೂ ಆಗಮಿಸಿದ್ದಾರೆ. ‘ಅಮೆರಿಕ ಅಮೆರಿಕ’ ದೃಶ್ಯವನ್ನು ಮರುಸೃಷ್ಟಿ ಮಾಡಲಾಗಿದೆ. ಈ ವಿಡಿಯೋ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More