ಅಮೆರಿಕದ ಶ್ವೇತ ಭವನದ ಬಳಿ ಗುಂಡಿನ ದಾಳಿ, ಇಬ್ಬರು ನ್ಯಾಷನಲ್​ ಗಾರ್ಡ್​​ಗಳಿಗೆ ಗಾಯ

Updated on: Nov 27, 2025 | 7:15 AM

ಅಮೆರಿಕದಲ್ಲಿ ಗುಂಡಿನ ದಾಳಿ ಮುಂದುವರೆದಿದೆ. ಶ್ವೇತಭವನದ ಬಳಿ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ನ್ಯಾಷನಲ್​ ಗಾರ್ಡ್​​ಗಳಿಗೆ ಗಾಯಗಳಾಗಿವೆ. ಮೆಟ್ರೋಪಾಲಿಟನ್ ಪೊಲೀಸ್ ಜೆಫ್ ಕ್ಯಾರೊಲ್ ಮಾತನಾಡಿ, ನ್ಯಾಷನಲ್ ಗಾರ್ಡ್​ ಪಡೆಗಳು ಗಸ್ತು ತಿರುಗುತ್ತಿದ್ದಾಗ ದಾಳಿಕೋರ ಒಂದು ಮೂಲೆಯಲ್ಲಿ ಬಂದು ಹೊಂಚು ಹಾಕಿ ಕುಳಿತಿದ್ದ. ಗುಂಡಿನ ದಾಳಿಯ ನಂತರ, ಇತರ ಗಾರ್ಡ್ ಸದಸ್ಯರು ಸುತ್ತುವರೆದು ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಾಷಿಂಗ್ಟನ್, ನವೆಂಬರ್ 27: ಅಮೆರಿಕದಲ್ಲಿ ಗುಂಡಿನ ದಾಳಿ ಮುಂದುವರೆದಿದೆ. ಶ್ವೇತಭವನದ ಬಳಿ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ನ್ಯಾಷನಲ್​ ಗಾರ್ಡ್​​ಗಳಿಗೆ ಗಾಯಗಳಾಗಿವೆ. ಮೆಟ್ರೋಪಾಲಿಟನ್ ಪೊಲೀಸ್ ಜೆಫ್ ಕ್ಯಾರೊಲ್ ಮಾತನಾಡಿ, ನ್ಯಾಷನಲ್ ಗಾರ್ಡ್​ ಪಡೆಗಳು ಗಸ್ತು ತಿರುಗುತ್ತಿದ್ದಾಗ ದಾಳಿಕೋರ ಒಂದು ಮೂಲೆಯಲ್ಲಿ ಬಂದು ಹೊಂಚು ಹಾಕಿ ಕುಳಿತಿದ್ದ. ಗುಂಡಿನ ದಾಳಿಯ ನಂತರ, ಇತರ ಗಾರ್ಡ್ ಸದಸ್ಯರು ಸುತ್ತುವರೆದು ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ಆತನನ್ನು ವಿಚಾರಣೆ ನಡೆಸಲಾಗುತ್ತಿದೆ. ಗಾರ್ಡ್​ಗಳು ಗಂಭೀರ ಸ್ಥಿತಿಯಲ್ಲಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಮತ್ತು ವಾಷಿಂಗ್ಟನ್ ಮೇಯರ್ ಮುರಿಯಲ್ ಬೌಸರ್ ತಿಳಿಸಿದ್ದಾರೆ. ಅಧ್ಯಕ್ಷ ಟ್ರಂಪ್ ಕೂಡ ಗುಂಡಿನ ದಾಳಿಯ ಕುರಿತು ಹೇಳಿಕೆ ನೀಡಿದ್ದು, ದಾಳಿಕೋರನನ್ನು ಸುಮ್ಮನೆ ಬಿಡುವುದಿಲ್ಲ ಎಂದಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More