ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ

Updated on: Aug 13, 2025 | 11:49 AM

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ತಂಡ ಮುಂಬರುವ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ. ಇದು ಒಂದು ಧಾರ್ಮಿಕ ಭೇಟಿಯಾಗಿದ್ದು, ಎಸ್ಐಟಿ ತನಿಖೆಯ ಹಿನ್ನೆಲೆಯಲ್ಲಿ ನಡೆಯುತ್ತಿದೆ ಎಂದು ಹೇಳಲಾಗಿದೆ. ತನಿಖೆಯಲ್ಲಿ ಸತ್ಯ ಬಹಿರಂಗಗೊಳ್ಳಬೇಕು ಹಾಗೂ ಗೊಂದಲಗಳಿಗೆ ತೆರೆ ಬೀಳಬೇಕು ಎಂದು ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರು, ಆಗಸ್ಟ್ 13: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಗುಂಪು ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ. ಈ ಭೇಟಿಯ ಉದ್ದೇಶ ಮಂಜುನಾಥೇಶ್ವರ ದೇವರ ದರ್ಶನ ಪಡೆಯುವುದು ಎಂದು ವಿಜಯೇಂದ್ರ ಹೇಳಿದ್ದಾರೆ. ಆದರೆ, ಧರ್ಮಸ್ಥಳದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಎಸ್ಐಟಿ ತನಿಖೆ ಮತ್ತು ಅದರ ಸುತ್ತಮುತ್ತಲಿನ ರಾಜಕೀಯ ಚರ್ಚೆಗಳ ಹಿನ್ನೆಲೆಯಲ್ಲಿ ಈ ಭೇಟಿಗೆ ರಾಜಕೀಯ ಮಹತ್ವವನ್ನೂ ಕಲ್ಪಿಸಲಾಗಿದೆ. ವಿಜಯೇಂದ್ರ ಅವರು ಎಸ್ಐಟಿ ತನಿಖೆ ಶೀಘ್ರವಾಗಿ ಮುಗಿಯಬೇಕು ಮತ್ತು ಸತ್ಯ ಬಹಿರಂಗಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ಈ ತನಿಖೆಯ ಹಿಂದೆ ಕೆಲವು ಸಮಾಜಘಾತಕ ಶಕ್ತಿಗಳು ಕುತಂತ್ರ ನಡೆಸುತ್ತಿವೆ ಎಂಬ ಚರ್ಚೆಗಳಿಗೆ ಪ್ರತಿಕ್ರಿಯಿಸುವ ಸಂಕೇತವಾಗಿ ಈ ಭೇಟಿ ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ