ಸಿದ್ದರಾಮಯ್ಯ, ಡಿಕೆಶಿ ಸಿಎಂ ಕುರ್ಚಿ ಫೈಟ್ ನಡುವೆ ರೇಸ್ಗೆ ಮತ್ತೊಬ್ಬರ ಎಂಟ್ರಿ!
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿ ಸ್ಥಾನದ ರೇಸ್ ಕುರಿತು ಮಾತನಾಡಿ, ತಾವು ಯಾವತ್ತಿಗೂ ರೇಸ್‌ನಲ್ಲಿ ಇರುವುದಾಗಿ ತಿಳಿಸಿದರು. ಸಿಎಂ ಸ್ಥಾನದ ಬಗ್ಗೆ ಯಾವುದೇ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.
ಬೆಂಗಳೂರು, ನವೆಂಬರ್ 23: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಡೆಯುತ್ತಿರುವ ಚರ್ಚೆಗಳ ಕುರಿತು ಪ್ರತಿಕ್ರಿಯಿಸುತ್ತಾ, ನಾನು ಯಾವಾಗಲೂ ಸಿಎಂ ರೇಸ್‌ನಲ್ಲಿರುವುದಾಗಿ ಹೇಳಿದ್ದಾರೆ. 2013ರಲ್ಲಿ ನಾನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿದ್ದಾಗ ಸರ್ಕಾರವನ್ನು ಅಧಿಕಾರಕ್ಕೆ ತರಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ದೇವೆ. ಆ ಸಂದರ್ಭದಲ್ಲಿ ನಾನು ಚುನಾವಣೆಯಲ್ಲಿ ಪರಾಭವಗೊಂಡಿದ್ದರಿಂದ ಸಿಎಂ ಆಗುವ ಅವಕಾಶ ತಪ್ಪಿತ್ತು. ಸಿಎಂ ಕುರ್ಚಿ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಖರ್ಗೆಯವರು ಕರ್ನಾಟಕದ ರಾಜಕಾರಣವನ್ನು 50 ವರ್ಷಗಳ ಸುದೀರ್ಘ ಅನುಭವದೊಂದಿಗೆ ಚೆನ್ನಾಗಿ ಬಲ್ಲವರಾಗಿರುವುದರಿಂದ, ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಹಿಂದಿರುಗಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Nov 23, 2025 10:51 AM
