ಒಳನುಸುಳುಕೋರರನ್ನು ರಕ್ಷಿಸುವ ಉದ್ದೇಶದಿಂದ ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಇಂದು ಬಿಹಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ರಾಹುಲ್ ಗಾಂಧಿಯವರ ಯಾತ್ರೆ ಒಳನುಸುಳುಕೋರರನ್ನು ರಕ್ಷಿಸುವ ಉದ್ದೇಶವನ್ನು ಹೊಂದಿದೆ" ಎಂದು ಅಮಿತ್ ಶಾ ಹೇಳಿದರು. ರಾಹುಲ್ ಗಾಂಧಿಯ ಮತದಾರರ ಅಧಿಕಾರ ಯಾತ್ರೆ ಬಾಂಗ್ಲಾದೇಶಿ ನುಸುಳುಕೋರರನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ. ಬಿಹಾರ ರಾಜ್ಯದಲ್ಲಿ ಇಂಡಿಯ ಬಣ ಅಧಿಕಾರಕ್ಕೆ ಬಂದರೆ ಬಿಹಾರ "ಒಳನುಸುಳುಕೋರರಿಂದ ತುಂಬಿರುತ್ತದೆ" ಎಂದು ಅವರು ಎಚ್ಚರಿಸಿದ್ದಾರೆ.
ಪಾಟ್ನಾ, ಸೆಪ್ಟೆಂಬರ್ 18: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬಿಹಾರದಲ್ಲಿ ಇಂದು ವಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ‘ವೋಟ್ ಚೋರಿ’ ಆರೋಪಕ್ಕೆ ತಿರುಗೇಟು ನೀಡಿದ ಅಮಿತ್ ಶಾ ಇದನ್ನು ‘ಸುಳ್ಳು ನಿರೂಪಣೆ’ ಎಂದು ಟೀಕಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ರದ್ದುಗೊಳಿಸುತ್ತದೆ ಎಂಬ ರಾಹುಲ್ ಗಾಂಧಿಯ ಆರೋಪವನ್ನು ಅವರು ತಳ್ಳಿಹಾಕಿದ್ದಾರೆ. ರಾಹುಲ್ ಗಾಂಧಿಯವರ (Rahul Gandhi) ಮತದಾರರ ಅಧಿಕಾರ ಯಾತ್ರೆಯು ಬಾಂಗ್ಲಾದೇಶದ ನುಸುಳುಕೋರರನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ. ಬಿಹಾರ ರಾಜ್ಯದಲ್ಲಿ ಇಂಡಿಯ ಬಣ ಅಧಿಕಾರಕ್ಕೆ ಬಂದರೆ ಬಿಹಾರವು “ನುಸುಳುಕೋರರಿಂದ ತುಂಬಿರುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.
ಆಗಸ್ಟ್ 17ರಿಂದ ಸೆಪ್ಟೆಂಬರ್ 1ರವರೆಗೆ ರಾಹುಲ್ ಗಾಂಧಿ ಬಿಹಾರದಲ್ಲಿ ಮತದಾರರ ಅಧಿಕಾರ ಯಾತ್ರೆಯನ್ನು ನಡೆಸಿದರು. 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಒಳಗೊಂಡ ಈ ಯಾತ್ರೆಯು ಸಸಾರಂನಿಂದ ಪ್ರಾರಂಭವಾಗಿ ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಮುಕ್ತಾಯವಾಯಿತು. ರಾಹುಲ್ ಗಾಂಧಿ “ಸಂವಿಧಾನವನ್ನು ಉಳಿಸಲು” ಈ ಯಾತ್ರೆಯನ್ನು ಆಯೋಜಿಸಿದ್ದೇನೆ ಎಂದು ಹೇಳಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

