Amit Shah in Varuna Live: ಸಿದ್ದರಾಮಯ್ಯ ಕ್ಷೇತ್ರಕ್ಕೆ ಲಗ್ಗೆಯಿಟ್ಟ ಕೇಂದ್ರ ಗೃಹ ಸಚಿವ ಅಮಿತ್ ಶಾ, ವರುಣಾದಲ್ಲಿ ಸೋಮಣ್ಣ ಪರ ಮತಯಾಚನೆ

Edited By:

Updated on: May 02, 2023 | 1:53 PM

ಈ ಕ್ಷೇತ್ರದಿಂದ ಬಿಜೆಪಿ ಪರವಾಗಿ ಸಚಿವ ವಿ ಸೋಮಣ್ಣ ಸ್ಪರ್ಧಿಸುತ್ತಿರುವುದು ಗೊತ್ತಿರುವ ವಿಚಾರವೇ.

ಮೈಸೂರು: ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಇಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ (Siddaramaiah) ಸ್ಪರ್ಧಿಸುತ್ತಿರುವ ಜಿಲ್ಲೆಯ ವರುಣಾ ಕ್ಷೇತ್ರಕ್ಕೆ ಲಗ್ಗೆಯಿಟ್ಟಿದ್ದಾರೆ. ಈ ಕ್ಷೇತ್ರದಿಂದ ಬಿಜೆಪಿ ಪರವಾಗಿ ಸಚಿವ ವಿ ಸೋಮಣ್ಣ (V Somanna) ಸ್ಪರ್ಧಿಸುತ್ತಿರುವುದು ಗೊತ್ತಿರುವ ವಿಚಾರವೇ. ಅಮಿತ್ ಶಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸೋಮಣ್ಣ, ನಟ-ರಾಜಕಾರಣಿ ಶಶಿಕುಮಾರ್, ಸಂಸದ ಪ್ರತಾಪ್ ಸಿಂಹ ಮೊದಲಾದ ನಾಯಕರರಿದ್ದರು. ಗೃಹ ಸಚಿವರ ಭಾಷಣವನ್ನು ನೇರವಾಗಿ ಆಲಿಸಲು ಪೂರ್ತಿ ವಿಡಿಯೋ ನೋಡಿ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 02, 2023 01:16 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More