Amit Shah in Bengaluru: ಬಿಎಸ್ ಯಡಿಯೂರಪ್ಪ ಮನೆಯಲ್ಲಿ ಉಪಹಾರ ಸೇವಿಸಿದ ಶಾ ರಾಜ್ಯ ನಾಯಕರೊಂದಿಗೆ ಚುನಾವಣಾ ರಣನೀತಿ ಚರ್ಚಿಸಿದರು
ಬಿಎಸ್ ವೈ ನಿವಾಸದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲು, ಗೋವಿಂದ ಕಾರಜೋಳ ಜೊತೆ ಚುನಾವಣೆಗೆ ಸಂಬಂಧಿಸಿದ ಹಲವು ವಿಷಯಗಳನ್ನು ಚರ್ಚಿಸಿದರು.
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿ ನಗರದ ಖಾಸಗಿ ಹೋಟೆಲೊಂದರಲ್ಲಿ ತಂಗಿದ್ದಾರೆ. ಶುಕ್ರವಾರ ಬೆಳಗ್ಗೆ ಅವರು ಬೆಳಗಿನ ಉಪಹಾರಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ (BS Yediyurappa) ಮನೆಗೆ ತೆರಳಿದರು. ಈ ಸಂದರ್ಭದಲ್ಲಿ ಬಿಎಸ್ ವೈ ನಿವಾಸದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿ (Basavaraj Bommai), ಪಕ್ಷದ ರಾಜ್ಯ ಘಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ನೀರಾವರಿ ಸಚಿವ ಗೋವಿಂದ ಕಾರಜೋಳ ಜೊತೆ ಚುನಾವಣೆಗೆ ಸಂಬಂಧಿಸಿದ ಹಲವು ವಿಷಯಗಳನ್ನು ಚರ್ಚಿಸಿದರು. ಬಿಎಸ್ ವೈ ಕುಟುಂಬ ಮೂಲಗಳ ಪ್ರಕಾರ, ಉಪಹಾರಕ್ಕೆ ದೋಸೆ, ಇಡ್ಲಿ, ಪೊಂಗಲ್ ಮತ್ತು ಉಪ್ಪಿಟ್ಟು ತಯಾರಿಸಲಾಗಿತ್ತು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ