Karnataka Assembly Polls: ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರ್ಜರಿ ರೋಡ್ ಶೋ
ಬಿಜೆಪಿ ಕಾರ್ಯಕರ್ತರ ಕೈಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಬಿಎಸ್ ಯಡಿಯೂರಪ್ಪನವರ ಕಟೌಟ್ಗಳಿದ್ದವು.
ತುಮಕೂರು: ಜಿಲ್ಲೆಯ ಗುಬ್ಬಿ ಹಾಗೂ ತಿಪಟೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅಬ್ಬರದ ಪ್ರಚಾರ ನಡೆಸಿದರು. ತಿಪಟೂರು ಕ್ಷೇತ್ರದಲ್ಲಿ ಅವರು ನಡೆಸಿದ ರೋಡ್ ಶೋ ಈ ವಿಡಿಯೋದಲ್ಲಿ ನೋಡಬಹುದಾಗಿದೆ. ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಸಹಸ್ರಾರು ಜನ ಅಮಿತ್ ಶಾ ಮತ್ತು ಬಿಜೆಪಿ ಪರ ಘೋಷಣೆಗಳನ್ನು ಕೂಗಿದರು. ವಾಹನದಲ್ಲಿದ್ದ ಗೃಹ ಸಚಿವರು ಭಾರತ್ ಮಾತಾ ಕೀ ಅಂತ ಹೇಳಿದರೆ ನೆರೆದ ಜನ ಒಕ್ಕೊರಲಿಂದ ಜೈ ಅಂತ ಕೂಗುತ್ತಿದ್ದರು. ಶಾ ಅವರ ಪಕ್ಕದಲ್ಲಿದ್ದ ತಿಪಟೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿಸಿ ನಾಗೇಶ್ (BC Nagesh) ವಾಹನ ಮುಂದೆ ಸಾಗಲು ದಾರಿಬಿಡಿ ಎಂದು ಮೈಕ್ ಮುಖಾಂತರ ಮನವಿ ಮಾಡಿಕೊಳ್ಳುತ್ತಿದ್ದರು. ಬಿಜೆಪಿ ಕಾರ್ಯಕರ್ತರ ಕೈಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi), ಅಮಿತ್ ಶಾ ಮತ್ತು ಬಿಎಸ್ ಯಡಿಯೂರಪ್ಪನವರ ಕಟೌಟ್ ಗಳನ್ನು ನೋಡಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 01, 2023 04:23 PM
Latest Videos