Amit Shah: ಹಾಸನದಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ; ಕಾರ್ಯಕರ್ತರ ಮೇಲೆ ಹೂವಿನ ಮಳೆಗರೆದ ಶಾ
ಹಾನಸ ಜಿಲ್ಲೆಯ ಸಕಲೇಶಪುರದಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜನರು ಜಾಮಾಯಿಸಿದ್ದು, ಜನಸಂಖ್ಯೆ ನೋಡಿ ಖಷ್ ಆದ ಚುನಾವಣಾ ಚಾಣಕ್ಯ, ಕಾರ್ಯಕರ್ತರ ಮೇಲೆ ಹೂಮಳೆಗರೆದರು.
ಹಾಸನ: ಜಿಲ್ಲೆಯ ಸಕಲೇಶಪುರದಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ (Amit Shah) ಅವರು ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಜಮಾಯಿಸಿದ್ದರು. ಅಪಾರ ಜನಸ್ತೋಮ ನೋಡಿ ಸಂತೋಷಗೊಂಡ ಬಿಜೆಪಿ ಚಾಣಕ್ಯ, ಕಾರ್ಯಕರ್ತರ ಮೇಲೆ ಹೂಮಳೆಗರೆದರು. ತೆರೆದ ವಾಹನದಲ್ಲಿ ಕಾರ್ಯಕರ್ತರತ್ತ ಕೈಬೀಸುತ್ತಾ, ನಮಸ್ಕರಿಸುತ್ತಾ ಕಾರ್ಯಕರ್ತರ ಮೇಲೆ ಹೂ ಸುರಿಯುತ್ತಾ ಮುನ್ನಡೆದರು. ಇದೇ ವೇಳೆ ಮಾತನಾಡಿದ ಅಮಿತ್ ಶಾ, ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಪ್ರೀತಮ್ ಗೌಡ ಅವರು ಕುಟುಂಬ ರಾಜಕಾರಣ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಜೆಡಿಎಸ್ (JDS) ಪಕ್ಷಕ್ಕೆ ಮತ ನೀಡಿದರೆ ಅವರು ನಂತರ ಕಾಂಗ್ರೆಸ್ ಜೊತೆ ಸೇರುತ್ತಾರೆ. ಹೀಗಾಗಿ ಜೆಡಿಎಸ್ಗೆ ಮತ ಹಾಕಿದರೆ ಅದು ಕಾಂಗ್ರೆಸ್ಗೆ ಮತ ನೀಡಿದಂತೆ. ನೀವೆಲ್ಲರೂ ಬಿಜೆಪಿ (BJP) ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಮತ್ತಷ್ಟು ವಿಡಿಯೋ ಸ್ಟೋರಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

