ಸರ್ಕಾರದ ಮುಂದೆ ಶರಣಾಗಿ; ನಕ್ಸಲರಿಗೆ ಅಮಿತ್ ಶಾ ಖಡಕ್ ಎಚ್ಚರಿಕೆ

Updated on: Oct 04, 2025 | 5:51 PM

ಕೇಂದ್ರ ಸರ್ಕಾರವು ನಕ್ಸಲರೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಅಮಿತ್ ಶಾ ಪುನರುಚ್ಚರಿಸಿದರು. ಸರ್ಕಾರದ ಮುಂದೆ ಶರಣಾಗುವಂತೆ ಮತ್ತೊಮ್ಮೆ ಅವರು ನಕ್ಸಲರನ್ನು ಒತ್ತಾಯಿಸಿದರು. ಛತ್ತೀಸ್‌ಗಢದ ಜಗದಲ್‌ಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅಮಿತ್ ಶಾ, ನಕ್ಸಲರು ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸರ್ಕಾರದ ಪುನರ್ವಸತಿ ನೀತಿಯನ್ನು ಒಪ್ಪಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಬಸ್ತಾರ್, ಅಕ್ಟೋಬರ್ 4: ನಕ್ಸಲರಿಗೆ ಕಠಿಣ ಎಚ್ಚರಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಬಸ್ತಾರ್ ಪ್ರದೇಶದಲ್ಲಿ ಶಾಂತಿಯನ್ನು ಭಂಗಗೊಳಿಸಲು ಮಾವೋವಾದಿಗಳು ಪ್ರಯತ್ನಿಸಿದರೆ ಭದ್ರತಾ ಪಡೆಗಳಿಂದ ಅವರಿಗೆ ಕಠಿಣ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದರು. ಮುಂದಿನ ವರ್ಷ ಮಾರ್ಚ್ 31ರೊಳಗೆ ದೇಶದಲ್ಲಿ ‘ಕೆಂಪು ಭಯೋತ್ಪಾದನೆ’ ಕೊನೆಗೊಳ್ಳುತ್ತದೆ ಎಂದು ಅವರು ಪುನರುಚ್ಚರಿಸಿದರು.

ಕೇಂದ್ರ ಸರ್ಕಾರವು ನಕ್ಸಲರೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಅಮಿತ್ ಶಾ ಪುನರುಚ್ಚರಿಸಿದರು. ಸರ್ಕಾರದ ಮುಂದೆ ಶರಣಾಗುವಂತೆ ಮತ್ತೊಮ್ಮೆ ಅವರು ನಕ್ಸಲರನ್ನು ಒತ್ತಾಯಿಸಿದರು. ಛತ್ತೀಸ್‌ಗಢದ ಜಗದಲ್‌ಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅಮಿತ್ ಶಾ, ನಕ್ಸಲರು ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸರ್ಕಾರದ ಪುನರ್ವಸತಿ ನೀತಿಯನ್ನು ಒಪ್ಪಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ನಾವು ಬಹಳ ಉತ್ತಮವಾದ ಶರಣಾಗತಿ ನೀತಿಯನ್ನು ರೂಪಿಸಿದ್ದೇವೆ. ಬನ್ನಿ, ನಿಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ. ನೀವು ಶಸ್ತ್ರಾಸ್ತ್ರಗಳನ್ನು ತೆಗೆದುಕೊಂಡು ಬಸ್ತಾರ್‌ನ ಶಾಂತಿಯನ್ನು ಭಂಗಗೊಳಿಸಲು ಪ್ರಯತ್ನಿಸಿದರೆ ನಮ್ಮ ಸಶಸ್ತ್ರ ಪಡೆಗಳು, ಸಿಆರ್‌ಪಿಎಫ್ ಮತ್ತು ಛತ್ತೀಸ್‌ಗಢದ ಪೊಲೀಸರು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸುತ್ತಾರೆ ಎಂದು ಹೇಳಿದ್ದಾರೆ. ನಕ್ಸಲೀಯರೊಂದಿಗೆ ಮಾತುಕತೆ ನಡೆಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದಕ್ಕಾಗಿ ಎಡಪಕ್ಷಗಳನ್ನು ಅವರು ಟೀಕಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ