ಡಿಸೆಂಬರ್ 2029ರೊಳಗೆ ಭಾರತ ‘ಡ್ರಗ್ಸ್ ಮುಕ್ತ’ ದೇಶ: ಗೃಹ ಸಚಿವ ಅಮಿತ್ ಶಾ ಘೋಷಣೆ

Updated on: Oct 21, 2026 | 10:33 AM

ಭಾರತವನ್ನು ಡಿಸೆಂಬರ್ 31, 2029ರೊಳಗೆ ಸಂಪೂರ್ಣ ‘ಮಾದಕ ವಸ್ತು ಮುಕ್ತ’ ದೇಶವನ್ನಾಗಿ ರೂಪಿಸುವ ದೃಢ ಸಂಕಲ್ಪವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಕಟಿಸಿದ್ದಾರೆ. ನವದೆಹಲಿಯ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ನಡೆದ ‘ಪೊಲೀಸ್ ಸ್ಮರಣಾರ್ಥ ದಿನ’ದಂದು ಹುತಾತ್ಮ ಯೋಧರಿಗೆ ಪುಷ್ಪಗುಚ್ಛ ಅರ್ಪಿಸಿ ಗೌರವ ಸಲ್ಲಿಸಿದ ಅವರು, ಮಾದಕ ಜಾಲದ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ಎಲ್ಲಾ ರಾಜ್ಯಗಳ ಪೊಲೀಸ್ ಪಡೆಗಳಿಗೆ ಕರೆ ನೀಡಿದರು.

ನವದೆಹಲಿ, ಅಕ್ಟೋಬರ್ 21: ಭಾರತವನ್ನು ಡಿಸೆಂಬರ್ 31, 2029ರೊಳಗೆ ಸಂಪೂರ್ಣ ‘ಮಾದಕ ವಸ್ತು ಮುಕ್ತ’ ದೇಶವನ್ನಾಗಿ ರೂಪಿಸುವ ದೃಢ ಸಂಕಲ್ಪವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಕಟಿಸಿದ್ದಾರೆ. ನವದೆಹಲಿಯ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ನಡೆದ ‘ಪೊಲೀಸ್ ಸ್ಮರಣಾರ್ಥ ದಿನ’ದಂದು ಹುತಾತ್ಮ ಯೋಧರಿಗೆ ಪುಷ್ಪಗುಚ್ಛ ಅರ್ಪಿಸಿ ಗೌರವ ಸಲ್ಲಿಸಿದ ಅವರು, ಮಾದಕ ಜಾಲದ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ಎಲ್ಲಾ ರಾಜ್ಯಗಳ ಪೊಲೀಸ್ ಪಡೆಗಳಿಗೆ ಕರೆ ನೀಡಿದರು.

ಮಾದಕ ವಸ್ತುಗಳು ದೇಶದ ಆರ್ಥಿಕತೆ ಮತ್ತು ಪ್ರಗತಿಗೆ ಮಾರಕವಾಗಿದ್ದು, ಮುಂದಿನ ಮೂರೂವರೆ ವರ್ಷಗಳಲ್ಲಿ ಇದನ್ನು ಸಂಪೂರ್ಣವಾಗಿ ಮಟ್ಟಹಾಕಲು ಗೃಹ ಸಚಿವಾಲಯ ಕಾರ್ಯತಂತ್ರ ರೂಪಿಸಿದೆ ಎಂದರು. ಕಳೆದ ಮೂರು ದಶಕಗಳಿಂದ ದೇಶದ ಆಂತರಿಕ ಭದ್ರತೆಗೆ ಸವಾಲಾಗಿದ್ದ ಜಮ್ಮು-ಕಾಶ್ಮೀರದ ಭಯೋತ್ಪಾದನೆ, ಈಶಾನ್ಯ ರಾಜ್ಯಗಳ ಅಶಾಂತಿ ಹಾಗೂ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಇಂದು ಶಾಂತಿ ನೆಲೆಸಿದೆ. ಶಾಂತಿ ಒಪ್ಪಂದಗಳು ಮತ್ತು ಯೋಧರ ಕಠಿಣ ಪರಿಶ್ರಮದಿಂದ ನಕ್ಸಲಿಸಂ ನಿರ್ಮೂಲನೆಯಾಗುತ್ತಿದೆ ಎಂದು ಶ್ಲಾಘಿಸಿದರು. ಸಿಎಪಿಎಫ್ ಮತ್ತು ರಾಜ್ಯ ಪೊಲೀಸರ ತ್ಯಾಗದಿಂದಲೇ ಭಾರತ ಇಂದು ಜಾಗತಿಕ ಮಟ್ಟದಲ್ಲಿ ಭದ್ರವಾಗಿ ತಲೆಎತ್ತಿ ನಿಂತಿದೆ ಎಂದು ಅವರು ಕೃತಜ್ಞತೆ ವ್ಯಕ್ತಪಡಿಸಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Oct 21, 2026 10:32 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More