ಬಿಹಾರ ಚುನಾವಣೆಗೆ ಶಹಾಬುದ್ದೀನ್ ಮಗನನ್ನು ಕಣಕ್ಕಿಳಿಸಿದ್ದಕ್ಕೆ ಆರ್‌ಜೆಡಿ ವಿರುದ್ಧ ಅಮಿತ್ ಶಾ ವಾಗ್ದಾಳಿ
ಕುಖ್ಯಾತ ದರೋಡೆಕೋರ ಮೊಹಮ್ಮದ್ ಶಹಾಬುದ್ದೀನ್ ಅವರ ಪುತ್ರ ಒಸಾಮಾ ಶಹಾಬ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆರ್‌ಜೆಡಿ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ. ತಮ್ಮ ಭಾಷಣದಲ್ಲಿ ಬಿಹಾರದ ಚುನಾವಣೆಯಲ್ಲಿ ಎನ್‌ಡಿಎ ಗಮನಾರ್ಹ ಗೆಲುವು ಸಾಧಿಸಲಿದೆ ಎಂದು ಅವರು ತಮ್ಮ ನಂಬಿಕೆಯನ್ನು ವ್ಯಕ್ತಪಡಿಸಿದರು.
ಪಾಟ್ನಾ, ಅಕ್ಟೋಬರ್ 17: ದರೋಡೆಕೋರ ಮೊಹಮ್ಮದ್ ಶಹಾಬುದ್ದೀನ್ ಅವರ ಪುತ್ರ ಒಸಾಮಾ ಶಹಾಬ್ ಅವರಿಗೆ ಟಿಕೆಟ್ ನೀಡಿದ್ದಕ್ಕಾಗಿ ವಿರೋಧ ಪಕ್ಷದ ಆರ್‌ಜೆಡಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಟೀಕಿಸಿದ್ದಾರೆ. ಇಂತಹ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಬಿಹಾರದ ಜನರಿಗೆ ಭದ್ರತೆ ಹೇಗಿರುತ್ತದೆ? ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ. ಚುನಾವಣೆ ನಡೆಯಲಿರುವ ಬಿಹಾರದ ಸರನ್ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಎನ್‌ಡಿಎ 20 ವರ್ಷಗಳಲ್ಲಿಯೇ ಅತಿ ದೊಡ್ಡ ಬಹುಮತದೊಂದಿಗೆ ಬಿಹಾರ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಹಾರದ ಸಿವಾನ್ ಜಿಲ್ಲೆಯ ರಘುನಾಥಪುರ ವಿಧಾನಸಭಾ ಕ್ಷೇತ್ರದಿಂದ ಆರ್‌ಜೆಡಿ ಶಹಾಬ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

