ಬೆಂಗಳೂರಿಗೆ ಬಂದ ಅಮಿತ್ ಶಾ: ಬಿಜಿಎಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನೆಯಲ್ಲಿ ಭಾಗಿ
ಬೆಂಗಳೂರು ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಆಗಮಿಸಿದ್ದು ಬಿವೈ ವಿಜಯೇಂದ್ರ, ಬಿಎಸ್ ಯಡಿಯೂರಪ್ಪ ಸ್ವಾಗತಿಸಿದರು. ಇಂದು ಬಿಜಿಎಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮಲ್ಲಿ ಶಾ ಭಾಗವಹಿಸಲಿದ್ದಾರೆ. ಆ ಬಳಿಕ ರಾಜ್ಯ ನಾಯಕರನ್ನು ಭೇಟಿಯಾಗುವ ನಿರೀಕ್ಷೆ ಇದೆ.
ಬೆಂಗಳೂರು, ಜೂನ್ 20: ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ವಾಗತಿಸಿದರು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಹ ರಾತ್ರಿಯೇ ಅಮಿತ್ ಶಾರನ್ನು ಭೇಟಿಯಾಗಿದ್ದಾರೆ. ನೆಲಮಂಗಲ ಬಳಿಯ ನಗರೂರು ಬಿಜಿಎಸ್ ಕಾಲೇಜು ಆವರಣದಲ್ಲಿ ಬಿಜಿಎಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ.
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
