ಬೆಂಗಳೂರಿಗೆ ಬಂದ ಅಮಿತ್ ಶಾ: ಬಿಜಿಎಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನೆಯಲ್ಲಿ ಭಾಗಿ

Edited By:

Updated on: Jun 20, 2025 | 8:52 AM

ಬೆಂಗಳೂರು ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್​ ಹೋಟೆಲ್​ಗೆ ಆಗಮಿಸಿದ್ದು ಬಿವೈ ವಿಜಯೇಂದ್ರ, ಬಿಎಸ್ ಯಡಿಯೂರಪ್ಪ ಸ್ವಾಗತಿಸಿದರು. ಇಂದು ಬಿಜಿಎಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮಲ್ಲಿ ಶಾ ಭಾಗವಹಿಸಲಿದ್ದಾರೆ. ಆ ಬಳಿಕ ರಾಜ್ಯ ನಾಯಕರನ್ನು ಭೇಟಿಯಾಗುವ ನಿರೀಕ್ಷೆ ಇದೆ.

ಬೆಂಗಳೂರು, ಜೂನ್ 20: ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್​ ಹೋಟೆಲ್​​ನಲ್ಲಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ವಾಗತಿಸಿದರು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಹ ರಾತ್ರಿಯೇ ಅಮಿತ್ ಶಾರನ್ನು ಭೇಟಿಯಾಗಿದ್ದಾರೆ. ನೆಲಮಂಗಲ ಬಳಿಯ ನಗರೂರು ಬಿಜಿಎಸ್ ಕಾಲೇಜು ಆವರಣದಲ್ಲಿ ಬಿಜಿಎಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ