ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಮಿತ್ ಶಾ ಪುತ್ರ ಜಯ್ ಶಾ ಭೇಟಿ: ತಂದೆ ಹೆಸರಲ್ಲಿ ನಿತ್ಯ ಅನ್ನದಾನಕ್ಕೆ ದೇಣಿಗೆ
ವಿಶ್ವ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾನುವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಧಾನ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಜಯ್ ಶಾ ಮತ್ತು ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ, ಜುಲೈ 30: ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ (Kukke Subramanya temple) ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಧಾನ ಕಾರ್ಯದರ್ಶಿ ಜಯ್ ಶಾ ಮತ್ತು ಪತ್ನಿ ರಿಷಿತಾ ಶಾ ಹಾಗೂ ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಂದೆ ಅಮಿತ್ ಶಾ ಹೆಸರಿನಲ್ಲಿ ನಿತ್ಯ ಅನ್ನದಾನಕ್ಕೆ ದೇಣಿಗೆ ಜಯ್ ಶಾ ದೇಣಿಗೆ ನೀಡಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮತ್ತು ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ ಮಡ್ತಿಲ ಸಾಥ್ ನೀಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 30, 2023 07:33 PM