ಅಮರಾವತಿಯಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್-ಟೆಂಪೋ ಡಿಕ್ಕಿಗೆ 7 ಮಂದಿ ಸಾವು, 19 ಜನರಿಗೆ ಗಾಯ
ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 19 ಜನರು ಗಾಯಗೊಂಡಿದ್ದಾರೆ. ಸಮೃದ್ಧಿ ಹೆದ್ದಾರಿಯಲ್ಲಿ ಧಮನ್‌ಗಾಂವ್ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ. ಶೇಗಾಂವ್‌ನಿಂದ ವಾರ್ಧಾಕ್ಕೆ ದುರ್ಗಾ ವಿಗ್ರಹದೊಂದಿಗೆ ಭಕ್ತರನ್ನು ಕರೆದೊಯ್ಯುತ್ತಿದ್ದ ಟೆಂಪೋ ಪಿಕಪ್ ವಾಹನಕ್ಕೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟೆಂಪೋದಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಅಮರಾವತಿ, ಅಕ್ಟೋಬರ್ 02: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 19 ಜನರು ಗಾಯಗೊಂಡಿದ್ದಾರೆ. ಸಮೃದ್ಧಿ ಹೆದ್ದಾರಿಯಲ್ಲಿ ಧಮನ್‌ಗಾಂವ್ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ. ಶೇಗಾಂವ್‌ನಿಂದ ವಾರ್ಧಾಕ್ಕೆ ದುರ್ಗಾ ವಿಗ್ರಹದೊಂದಿಗೆ ಭಕ್ತರನ್ನು ಕರೆದೊಯ್ಯುತ್ತಿದ್ದ ಟೆಂಪೋ ಪಿಕಪ್ ವಾಹನಕ್ಕೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟೆಂಪೋದಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಗೊಂಡ 19 ಮಂದಿಯನ್ನು ಹೊರತೆಗೆದು ಸಮೀಪದ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಲಾಯಿತು. ಕೆಲವು ಸ್ಥಳೀಯರು ಹಾಗೂ ಪತ್ರಕರ್ತರೂ ರಕ್ಷಣಾ ಕಾರ್ಯದಲ್ಲಿ ಪೊಲೀಸರಿಗೆ ನೆರವಾದರು. ಬಳಿಕ ರೈಲ್ವೆ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದರು.
ಅಪಘಾತದಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಟ್ರಕ್ ಚಾಲಕನ ನಿರ್ಲಕ್ಷ್ಯ, ವೇಗ ಸೇರಿದಂತೆ ಹಲವು ಅಂಶಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು,ಪ್ರಕರಣದ ತನಿಖೆ ಮುಂದುವರೆದಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

