ಅಮೃತ್ ಭಾರತ್ ನಿಲ್ದಾಣ ಯೋಜನೆ; ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಅತ್ಯಂತ ದೊಡ್ಡ ಕ್ರಾಂತಿಕಾರಿ ಬದಲಾವಣೆಗೆ ಕೇಂದ್ರ ಸರ್ಕಾರ ಮುನ್ನುಡಿ ಬರೆದಿದೆ. ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಬರೋಬ್ಬರಿ 71,000 ಕೋಟಿ ರೂ. ಬೃಹತ್ ಹೂಡಿಕೆಯೊಂದಿಗೆ ರೈಲ್ವೆ ಜಾಲವನ್ನು ವಿಶ್ವದರ್ಜೆಯ ಸಾರಿಗೆ ಹಬ್‌ಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಒಟ್ಟು 1,340 ರೈಲ್ವೆ ನಿಲ್ದಾಣಗಳು ಒಂದು ಭವ್ಯ ದೃಷ್ಟಿಕೋನದೊಂದಿಗೆ ಸಂಪೂರ್ಣ ಆಧುನಿಕ ಹಾಗೂ ಸುಂದರ ರೂಪಾಂತರವನ್ನು ಪಡೆಯುತ್ತಿವೆ. ದೇಶಾದ್ಯಂತ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಕಾರ್ಯವು ಅತ್ಯಂತ ವೇಗವಾಗಿ ಸಾಗುತ್ತಿದ್ದು, ಅತ್ಯಾಧುನಿಕ ಸೌಲಭ್ಯಗಳು ಸಾರ್ವಜನಿಕ ಸೇವೆಗೆ ಸಿದ್ಧವಾಗುತ್ತಿವೆ. ಈಗಾಗಲೇ ಒಟ್ಟು 122 ರೈಲ್ವೆ ನಿಲ್ದಾಣಗಳ ಆಧುನೀಕರಣದ ಕೆಲಸ ಯಶಸ್ವಿಯಾಗಿ ಪೂರ್ಣಗೊಂಡಿದೆ.
ನವದೆಹಲಿ, ಜುಲೈ 16: ಭಾರತೀಯ ರೈಲ್ವೆಯನ್ನು (Indian Railways) ವಿಶ್ವದರ್ಜೆಯ ಸೌಲಭ್ಯಗಳೊಂದಿಗೆ ಆಧುನೀಕರಿಸಲು ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಯೋಜನೆಯೇ ‘ಅಮೃತ್ ಭಾರತ್ ನಿಲ್ದಾಣ ಯೋಜನೆ’ (Amrit Bharat Station Scheme). ಈ ಯೋಜನೆಯಡಿ ದೇಶಾದ್ಯಂತ ಒಟ್ಟು 1,340 ರೈಲ್ವೆ ನಿಲ್ದಾಣಗಳನ್ನು ಅತ್ಯಾಧುನಿಕ ಹಾಗೂ ಸಾಂಸ್ಕೃತಿಕ ಸೊಗಡಿನ ತಾಣಗಳನ್ನಾಗಿ ಮರುರೂಪಿಸಲಾಗುತ್ತಿದೆ. ಈ ಅಭಿವೃದ್ಧಿ ಕ್ರಾಂತಿಯ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ಮರುರೂಪಿಸಲಾದ 75 ರೈಲ್ವೆ ನಿಲ್ದಾಣಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ನಾಳೆ (ಶುಕ್ರವಾರ) ಉದ್ಘಾಟಿಸಿ ದೇಶಕ್ಕೆ ಸಮರ್ಪಿಸಲಿದ್ದಾರೆ.
ಈ ಮೂಲಕ ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಅತ್ಯಂತ ದೊಡ್ಡ ಕ್ರಾಂತಿಕಾರಿ ಬದಲಾವಣೆಗೆ ಕೇಂದ್ರ ಸರ್ಕಾರ ಮುನ್ನುಡಿ ಬರೆದಿದೆ. ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಬರೋಬ್ಬರಿ 71,000 ಕೋಟಿ ರೂ. ಬೃಹತ್ ಹೂಡಿಕೆಯೊಂದಿಗೆ ರೈಲ್ವೆ ಜಾಲವನ್ನು ವಿಶ್ವದರ್ಜೆಯ ಸಾರಿಗೆ ಹಬ್‌ಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಒಟ್ಟು 1,340 ರೈಲ್ವೆ ನಿಲ್ದಾಣಗಳು ಒಂದು ಭವ್ಯ ದೃಷ್ಟಿಕೋನದೊಂದಿಗೆ ಸಂಪೂರ್ಣ ಆಧುನಿಕ ಹಾಗೂ ಸುಂದರ ರೂಪಾಂತರವನ್ನು ಪಡೆಯುತ್ತಿವೆ. ದೇಶಾದ್ಯಂತ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಕಾರ್ಯವು ಅತ್ಯಂತ ವೇಗವಾಗಿ ಸಾಗುತ್ತಿದ್ದು, ಅತ್ಯಾಧುನಿಕ ಸೌಲಭ್ಯಗಳು ಸಾರ್ವಜನಿಕ ಸೇವೆಗೆ ಸಿದ್ಧವಾಗುತ್ತಿವೆ. ಈಗಾಗಲೇ ಒಟ್ಟು 122 ರೈಲ್ವೆ ನಿಲ್ದಾಣಗಳ ಆಧುನೀಕರಣದ ಕೆಲಸ ಯಶಸ್ವಿಯಾಗಿ ಪೂರ್ಣಗೊಂಡಿದೆ.
(Video Source: Indian Railways)
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ

