ಆರೋಪಮುಕ್ತ ಈಶ್ವರಪ್ಪ ಕುಟುಂಬಸಮೇತರಾಗಿ ಮೈಸೂರು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jul 22, 2022 | 10:52 AM

ಈಶ್ವರಪ್ಪನವರು ಕುಟುಂಬ ಸಮೇತರಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು.

ಮೈಸೂರು: ಬೆಳಗಾವಿ ಗುತ್ತಿಗೆದಾರ ಸಂತೋಷ ಪಾಟೀಲ (Santosh Patil) ಆತ್ಮಹತ್ಯೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಆರೋಪಮುಕ್ತರಾಗಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು (KS Eshwarappa) ಖುಷಿಯಿಂದ ಬೀಗುತ್ತಿದ್ದಾರೆ. ಆಷಾಢ ಮಾಸದ ನಾಲ್ಕನೇ ಶುಕ್ರವಾರವಾಗಿರುವ ಇಂದು ಈಶ್ವರಪ್ಪನವರು ಕುಟುಂಬ ಸಮೇತರಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ನಾಡದೇವತೆ ಚಾಮುಂಡೇಶ್ವರಿಗೆ (Chamundeshwari) ಪೂಜೆ ಸಲ್ಲಿಸಿದರು.