ಕ್ವಾರಂಟೈನ್ಗೆ ಹೆದರಿ ತಂದೆಗೆ ಕೊರೊನಾ ಟೆಸ್ಟ್ ಮಾಡಿಸದ ಮಗ, ಕೊನೆಗೆ ಆಗಿದ್ದೇನು?
[lazy-load-videos-and-sticky-control id=”sTGGRfsaCjI”] ಬಳ್ಳಾರಿ: ಹಲವು ದಿನಗಳಿಂದ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ತಂದೆಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ವರದಿ ಪಾಸಿಟಿವ್ ಬಂದರೆ ತಾನು ಸಹ ಕ್ವಾರಂಟೈನ್ ಆಗಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಮಗ ತೀವ್ರ ಉಸಿರಾಟ ಸಮಸ್ಯೆ ಇರುವ ತಂದೆಗೆ ಕೊರೊನಾ ಟೆಸ್ಟ್ ಮಾಡಿಸಿಲ್ಲ! ಇದರಿಂದಾಗಿ ಇಂದು ಅನಾರೋಗ್ಯಪೀಡಿತ ವ್ಯಕ್ತಿ ಸಾವನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನೆಡೆದಿದೆ. ಬಳ್ಳಾರಿಯ RTO ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೃದ್ಧನ ಮಗ, ತಂದೆಗೆ ಪಾಸಿಟಿವ್ ಬಂದರೆ ನಾನು ಕ್ವಾರಂಟೈನ್ ಆಗಬೇಕಾಗುತ್ತದೆ ಎಂಬ ಕಾರಣದಿಂದ, ತಂದೆಗೆ […]
[lazy-load-videos-and-sticky-control id=”sTGGRfsaCjI”]
ಬಳ್ಳಾರಿ: ಹಲವು ದಿನಗಳಿಂದ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ತಂದೆಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ವರದಿ ಪಾಸಿಟಿವ್ ಬಂದರೆ ತಾನು ಸಹ ಕ್ವಾರಂಟೈನ್ ಆಗಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಮಗ ತೀವ್ರ ಉಸಿರಾಟ ಸಮಸ್ಯೆ ಇರುವ ತಂದೆಗೆ ಕೊರೊನಾ ಟೆಸ್ಟ್ ಮಾಡಿಸಿಲ್ಲ! ಇದರಿಂದಾಗಿ ಇಂದು ಅನಾರೋಗ್ಯಪೀಡಿತ ವ್ಯಕ್ತಿ ಸಾವನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನೆಡೆದಿದೆ.
ಬಳ್ಳಾರಿಯ RTO ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೃದ್ಧನ ಮಗ, ತಂದೆಗೆ ಪಾಸಿಟಿವ್ ಬಂದರೆ ನಾನು ಕ್ವಾರಂಟೈನ್ ಆಗಬೇಕಾಗುತ್ತದೆ ಎಂಬ ಕಾರಣದಿಂದ, ತಂದೆಗೆ ಕೊರೊನಾ ಟೆಸ್ಟ್ ಮಾಡಿಸಿಲ್ಲ. ಇದರಿಂದಾಗಿ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಬಳಲುತ್ತಿದ್ದ ವ್ಯಕ್ತಿಗೆ ನಿನ್ನೆ ರಾತ್ರಿ ಉಸಿರಾಟದ ತೊಂದರೆ ಹೆಚ್ಚಾಗಿದೆ.
ನಂತರ ವೃದ್ಧನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಆತನ ಮಗ ಮತ್ತು ಸ್ನೇಹಿತರು ಆಟೋದಲ್ಲಿ ಕರೆದುಕೊಂಡು ಹೋಗಿದ್ದಾರೆ. ಆದರೆ ವೃದ್ಧನಿಗೆ ಜ್ವರ ಮತ್ತು ಉಸಿರಾಟದ ತೊಂದರೆಯಿದೆ ಎಂಬುದನ್ನು ತಿಳಿದ ಆಟೋ ಚಾಲಕ ಶಂಕಿತನನ್ನು ರಸ್ತೆಯಲ್ಲಿ ಇಳಿಸಿ ಹೋಗಿದ್ದಾನೆ.
ನಂತರ ಆಂಬುಲೆನ್ಸ್ ವ್ಯವಸ್ಥೆ ಮಾಡಿ ಕೊರೊನಾ ಶಂಕಿತನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದ ಕಾರಣ ವೃದ್ಧ ಸಾವನ್ನಪ್ಪಿದ್ದಾರೆ. ಇನ್ನು ಮೃತ ವೃದ್ಧನಿಗೆ ಕೊರೊನಾ ಟೆಸ್ಟ್ ಮಾಡಿದ ಆಸ್ಪತ್ರೆ ಸಿಬ್ಬಂದಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
Published On - 3:28 pm, Sat, 1 August 20