ಮೈಸೂರಿನಲ್ಲಿ ಉದ್ದನೆಯ ದಂತಗಳಿಂದ ಪ್ರಖ್ಯಾತವಾಗಿದ್ದ ಆನೆ ಸಾವು
ವನ್ಯಜೀವಿ ಪ್ರಿಯರ ನೆಚ್ಚಿನ ಅನೆಯಾಗಿತ್ತು. ಕಬಿನಿಗೆ ಹೋಗುತ್ತಿದ್ದ ಪ್ರವಾಸಿಗರು ಈ ಆನೆ ಸಿಕ್ಕರೇ ಸಾಕು ಅಂತಿದ್ದರು. ಆದರೆ ಕೆಲವರಿಗೆ ಮಾತ್ರ ಕಾಣಿಸುತ್ತಿತ್ತು.
ಮೈಸೂರು: ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿಯಲ್ಲಿ (Kabini) ವಿಶೇಷ ದಂತ ಹೊಂದಿದ್ದ ಆನೆ (Elephant) ನಿನ್ನೆ (ಜೂನ್ 11) ಮೃತಪಟ್ಟಿದೆ. ಉದ್ದನೆಯ ದಂತಗಳಿಂದ ಪ್ರಖ್ಯಾತವಾಗಿದ್ದ ಭೋಗೇಶ್ವರ ಗಂಡಾನೆ ನಾಗರಹೊಳೆ, ಬಂಡೀಪುರ ವ್ಯಾಪ್ತಿಯಲ್ಲಿ ಹೆಚ್ಚು ಕಾಣಿಸುತ್ತಿತ್ತು. ಸಫಾರಿ ವೇಳೆ ಪ್ರವಾಸಿಗರಿಗೆ ಆಗಾಗ ಕಾಣಿಸಿಕೊಳ್ಳುತ್ತಿತ್ತು. ವನ್ಯಜೀವಿ ಪ್ರಿಯರ ನೆಚ್ಚಿನ ಅನೆಯಾಗಿತ್ತು. ಕಬಿನಿಗೆ ಹೋಗುತ್ತಿದ್ದ ಪ್ರವಾಸಿಗರು ಈ ಆನೆ ಸಿಕ್ಕರೇ ಸಾಕು ಅಂತಿದ್ದರು. ಆದರೆ ಕೆಲವರಿಗೆ ಮಾತ್ರ ಕಾಣಿಸುತ್ತಿತ್ತು. ಬಂಡೀಪುರ ವ್ಯಾಪ್ತಿಯ ಗುಂಡ ವಲಯದ ಅರಣ್ಯದಲ್ಲಿ ನಿನ್ನೆ ಸಾವನ್ನಪ್ಪಿದೆ. ಮರಣೋತ್ತರ ಪರೀಕ್ಷೆ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಅಂತ್ಯಕ್ರಿಯೆ ನಡೆಸಿದ್ದಾರೆ.
Latest Videos