ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ಜೆಡಿಎಸ್ ಎಂಎಲ್ಸಿ ಡಾ.ಸೂರಜ್ ರೇವಣ್ಣ ಜೈಲುಪಾಲು
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಎಂಎಲ್ಸಿ ಡಾ.ಸೂರಜ್ ರೇವಣ್ಣ (Suraj Revanna) ಅವರು ಜೈಲುಪಾಲಾಗಿದ್ದಾರೆ. ಸೂರಜ್ನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ಕೋರ್ಟ್ನ ನ್ಯಾಯಾಧೀಶರು ಆದೇಶಿಸಿದ್ದಾರೆ. ಅದರಂತೆ ಇದೀಗ ಪರಪ್ಪನ ಅಗ್ರಹಾರಕ್ಕೆ ಪೊಲೀಸರು ಕರೆದೊಯ್ದಿದ್ದಾರೆ.
ಬೆಂಗಳೂರು, ಜೂ.23: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಎಂಎಲ್ಸಿ ಡಾ.ಸೂರಜ್ ರೇವಣ್ಣ (Suraj Revanna) ಅವರು ಜೈಲುಪಾಲಾಗಿದ್ದಾರೆ. ಸೂರಜ್ನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ಕೋರ್ಟ್ನ ನ್ಯಾಯಾಧೀಶರು ಆದೇಶಿಸಿದ್ದಾರೆ. ಇಂದು(ಭಾನುವಾರ) ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ನಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್ ಮುಂದೆ ಸೂರಜ್ನನ್ನು ಹಾಸನ ಪೊಲೀಸರು ಹಾಜರುಪಡಿಸಿದ್ದರು. ಇದೀಗ ಪರಪ್ಪನ ಅಗ್ರಹಾರಕ್ಕೆ ಪೊಲೀಸರು ಕರೆದೊಯ್ದಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:12 pm, Sun, 23 June 24