ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ; ವಾಹನ ಸವಾರರ ಪರದಾಟ

Edited By:

Updated on: Sep 20, 2026 | 3:48 PM

ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಸುರಿದ ಭಾರಿ ಮಳೆಯಿಂದ ಹಲವು ಅವಾಂತರಗಳು ಸೃಷ್ಟಿಯಾಗಿವೆ. ರಸ್ತೆಗಳು ಜಲಾವೃತಗೊಂಡು, ಟ್ರಾಫಿಕ್ ಜಾಮ್ ಉಂಟಾಗಿದೆ. ಚಂದಾಪುರ-ದೊಮ್ಮಸಂದ್ರ ರೈಲ್ವೆ ಅಂಡರ್‌ಪಾಸ್ ಬಳಿ ನೀರು ನಿಂತು ವಾಹನ ಸವಾರರು ಪರದಾಡಿದ್ದಾರೆ. ಅನೈಜ್ಞಾನಿಕ ಕಾಮಗಾರಿಗಳೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಆನೇಕಲ್, ಸೆಪ್ಟೆಂಬರ್​ 20: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ವ್ಯಾಪಕ ಅವಾಂತರಗಳು ಸೃಷ್ಟಿಯಾಗಿದ್ದು, ಚಂದಾಪುರದಿಂದ ದೊಮ್ಮಸಂದ್ರಕ್ಕೆ ಸಂಪರ್ಕಿಸುವ ಮುಖ್ಯರಸ್ತೆಯ ರೈಲ್ವೆ ಅಂಡರ್‌ಪಾಸ್‌ನಲ್ಲಿ ಸುಮಾರು ಎರಡರಿಂದ ಮೂರು ಅಡಿಯಷ್ಟು ನೀರು ನಿಂತು ವಾಹನ ಸವಾರರು ಪರದಾಡಿದರು. ಮತ್ತೊಂದೆಡೆ, ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಹಳೆ ಚಂದಾಪುರ ಬಳಿ ಆಮೆಗತಿಯಲ್ಲಿ ಸಾಗುತ್ತಿರುವ ಕಾಮಗಾರಿಯ ಮಣ್ಣು ರಸ್ತೆಗೆ ಕೊಚ್ಚಿಬಂದು ಕಿ.ಮೀಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೊಲೀಸರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಣ್ಣು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿದರು. ಇನ್ನು ಆನೇಕಲ್‌ನಿಂದ ಬನ್ನೇರುಘಟ್ಟಕ್ಕೆ ಹೋಗುವ ಮಾರ್ಗದ ರಾಗಿಹಳ್ಳಿ ಗೇಟ್ ಬಳಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us