Video: ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ

Updated on: Apr 01, 2025 | 1:58 PM

ಖ್ಯಾತ ಉದ್ಯಮಿ ಮುಕೇಶ್​ ಅಂಬಾನಿ ಪುತ್ರ ಅನಂತ್ ಅಂಬಾನಿ(Anant Ambani) ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಪಾದಯಾತ್ರೆ ಆರಂಭಿಸಿದ್ದಾರೆ. ದ್ವಾರಕಾದಲ್ಲಿ ದ್ವಾರಕಾಧೀಶನ ದರ್ಶನದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಲು ನಿರ್ಧರಿಸಿದ್ದಾರೆ. 140 ಕಿ.ಮೀ ಪ್ರಯಾಣವು ಐದನೇ ದಿನಕ್ಕೆ ಕಾಲಿಟ್ಟಿದ್ದು, ದ್ವಾರಕಾ ತಲುಪಲು ಅವರಿಗೆ 2-4 ದಿನಗಳು ಬೇಕಾಗಬಹುದು ಎಂದು ಹೇಳಿದ್ದಾರೆ.

ಜಾಮ್ನಗರ, ಏಪ್ರಿಲ್ 1: ಖ್ಯಾತ ಉದ್ಯಮಿ ಮುಕೇಶ್​ ಅಂಬಾನಿ ಪುತ್ರ ಅನಂತ್ ಅಂಬಾನಿ(Anant Ambani) ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಪಾದಯಾತ್ರೆ ಆರಂಭಿಸಿದ್ದಾರೆ. ದ್ವಾರಕಾದಲ್ಲಿ ದ್ವಾರಕಾಧೀಶನ ದರ್ಶನದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಲು ನಿರ್ಧರಿಸಿದ್ದಾರೆ. 140 ಕಿ.ಮೀ ಪ್ರಯಾಣವು ಐದನೇ ದಿನಕ್ಕೆ ಕಾಲಿಟ್ಟಿದ್ದು, ದ್ವಾರಕಾ ತಲುಪಲು ಅವರಿಗೆ 2-4 ದಿನಗಳು ಬೇಕಾಗಬಹುದು ಎಂದು ಹೇಳಿದ್ದಾರೆ. ಯಾವುದೇ ಕೆಲಸವನ್ನು ಪ್ರಾರಂಭಿಸುವ ಮೊದಲು ನಾನು ಯಾವಾಗಲೂ ದ್ವಾರಕಾಧೀಶನನ್ನು ನೆನಪಿಸಿಕೊಳ್ಳುತ್ತಿದ್ದೆ ಮತ್ತು ಯಾವುದೇ ಅಡೆತಡೆಗಳಿಲ್ಲದೆ ಕೆಲಸ ಪೂರ್ಣಗೊಳ್ಳುತ್ತಿತ್ತು ಎಂದು ಹೇಳಿದರು. ದ್ವಾರಕಾಧೀಶನು ನಮ್ಮನ್ನು ಆಶೀರ್ವದಿಸಲಿ ಎಂದಿದ್ದಾರೆ. ಪ್ರತಿ ರಾತ್ರಿ 10-12 ಕಿಲೋಮೀಟರ್‌ಗಳನ್ನು ತನ್ನ Z+ ಭದ್ರತೆ ಮತ್ತು ಸ್ಥಳೀಯ ಪೊಲೀಸ್ ರಕ್ಷಣೆಯಲ್ಲಿ ಪಾದಯಾತ್ರೆ ನಡೆಸುತ್ತಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More