‘ಹೊಟ್ಟೆ ಪಾಡಿಗೆ ಏನು ಮಾಡ್ತೀಯಾ ಕೇಳಿದ್ರು’; ರಂಗಭೂಮಿ ದಿನಗಳನ್ನು ನೆನಪಿಸಿಕೊಂಡ ಅನಂತ್ ನಾಗ್
ಭಾನುವಾರ (ಸೆಪ್ಟೆಂಬರ್ 3) ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ‘ಅನಂತ ಅಭಿನಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅನಂತ್ ನಾಗ್ ಹಾಗೂ ಗಾಯತ್ರಿ ದಂಪತಿಯನ್ನು ಸಾರೋಟಿನಲ್ಲಿ ಮೆರವಣಿಗೆ ಮೂಲಕ ಸಭಾಂಗಣಕ್ಕೆ ತರಲಾಯಿತು.
ನಟ ಅನಂತ್ ನಾಗ್ (Anant Nag) ಅವರು ಚಿತ್ರರಂಗದಲ್ಲಿ 50 ವರ್ಷ ಕಳೆದಿದ್ದಾರೆ. ಇಂದು (ಸೆಪ್ಟೆಂಬರ್ 4) ಅವರಿಗೆ ಜನ್ಮದಿನದ ಸಂಭ್ರಮ. ಭಾನುವಾರ (ಸೆಪ್ಟೆಂಬರ್ 3) ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ‘ಅನಂತ ಅಭಿನಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅನಂತ್ ನಾಗ್ ಹಾಗೂ ಗಾಯತ್ರಿ ದಂಪತಿಯನ್ನು ಸಾರೋಟಿನಲ್ಲಿ ಮೆರವಣಿಗೆ ಮೂಲಕ ಸಭಾಂಗಣಕ್ಕೆ ತರಲಾಯಿತು. ಈ ವೇಳೆ ಮಾತನಾಡಿದ ಅವರು, ‘ನಾನು ಹಲವು ವರ್ಷ ನಾಟಕಗಳನ್ನು ಮಾಡುತ್ತಿದ್ದೆ. ನಾಟಕವೇನೋ ಸರಿ, ಹೊಟ್ಟೆ ಪಾಡಿಗೆ ಏನು ಮಾಡ್ತೀಯಾ ಎಂದು ಕೇಳುತ್ತಿದ್ದರು. ಅಷ್ಟು ಅನಿಶ್ಚಿತತೆ. ಆ ಬಳಿಕ ಸಿನಿಮಾ ರಂಗದಲ್ಲಿ ಅವಕಾಶ ಸಿಕ್ಕಿತು. 50 ವರ್ಷ ಸಿನಿಮಾ ರಂಗದಲ್ಲಿ ಕಳೆದೆ’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos