‘ನಾನಿರೋದು ಬಾಡಿಗೆ ಮನೆಯಲ್ಲಿ’; ಪ್ರಶಾಂತ್​ ಸಂಬರಗಿಗೆ ತಿರುಗೇಟು ನೀಡಿದ ಅನುಶ್ರೀ

Edited By:

Updated on: Sep 09, 2021 | 8:09 PM

ಡ್ರಗ್​ ಕೇಸ್​ಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ ಬೆನ್ನಲ್ಲೇ ಅನುಶ್ರೀ ಹೆಸರು ಮುನ್ನೆಲೆಗೆ ಬಂದಿದೆ. ಅಲ್ಲದೆ, ಅವರು ಮುಂಬೈಗೆ ಹಾರಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಅನುಶ್ರೀ ಸ್ಪಷ್ಟನೆ ನೀಡಿದ್ದಾರೆ.

ಅನುಶ್ರೀ ವಿರುದ್ಧ ಬಿಗ್​ ಬಾಸ್​ ಸ್ಪರ್ಧಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ಸಾಕಷ್ಟು ರೀತಿಯಲ್ಲಿ ಹೇಳಿಕೆಗಳನ್ನು ನೀಡಿದ್ದರು. ಈ ವಿಚಾರದಲ್ಲಿ ಅನುಶ್ರೀ ಸ್ಪಷ್ಟನೆ ನೀಡಿದ್ದಾರೆ. ‘ಪ್ರಶಾಂತ್​ ಸಂಬರಗಿ ಅವರು ಕಾನೂನು ಮೂಲಕ ಹೋಗಲಿ. ನಮ್ಮ ಸಮಾಜದಲ್ಲಿ ಕಾನೂನು ಇದೆ. ಎಲ್ಲ ವಿಚಾರಗಳಿಗೆ ಆಗಲೂ ಉತ್ತರ ಕೊಟ್ಟಿದ್ದೇನೆ, ಈಗಲೂ ಉತ್ತರ ಕೊಡುತ್ತಿದ್ದೇನೆ’ ಎಂದಿದ್ದಾರೆ ಅನುಶ್ರೀ.

‘ನನ್ನ ಬಗ್ಗೆ ಮಾತಾಡುವ ನೂರಾರು ಜನಕ್ಕೆ ಉತ್ತರಿಸಲು ಸಾಧ್ಯವಿಲ್ಲ. ನನ್ನ ವಿರುದ್ಧ ಮಾಡುತ್ತಿರುವ ಎಲ್ಲ ಆರೋಪಗಳು ಸುಳ್ಳು. ಯಾವಾಗ ವಿಚಾರಣೆಗೆ ಕರೆದರೂ ನಾನು ಹೋಗುತ್ತೇನೆ. ಚಾರ್ಜ್​ಶೀಟ್ ಬಗ್ಗೆ ನನಗೆ ಏನೇನೂ ಗೊತ್ತಿಲ್ಲ. ಕಿಶೋರ್ ಶೆಟ್ಟಿಯನ್ನು 12 ವರ್ಷದ ಹಿಂದೆ ನೋಡಿದ್ದೆ. 13 ವರ್ಷ ಹಿಂದೆ ಅವರು ಕೊರಿಯೋಗ್ರಾಫರ್ ಆಗಿದ್ರು. ಆ ರಿಯಾಲಿಟಿ ಶೋನಲ್ಲಿ ನಾನು ವಿನ್ನರ್ ಆಗಿದ್ದೆ. ಆಗ ಪ್ರಾಕ್ಟೀಸ್​ ಮಾಡಲು ಎಲ್ಲರೂ ಒಂದೇ ಕಡೆ ಇದ್ದೆವು’ ಎಂದು ಅನುಶ್ರೀ ಕಿಶೋರ್​ ಶೆಟ್ಟಿ ಪರಿಚಯ ಆಗಿದ್ದು ಹೇಗೆ ಎಂದು ವಿವರಸಿದ್ದಾರೆ.

ಇದನ್ನೂ ಓದಿ: ‘ನಾನು ಎಲ್ಲೂ ಹಾರಿ ಹೋಗಿಲ್ಲ, ಮುಂಬೈಗೆ ಹೋಗಿದ್ದು ವೈಯಕ್ತಿಕ ಕೆಲಸಕ್ಕಾಗಿ‘; ಆ್ಯಂಕರ್​ ಅನುಶ್ರೀ ಸ್ಪಷ್ಟನೆ

Loading...
Unable to load recommendations.
Follow Us
TV9 Web

TV9 Kannada

Read More