‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು
ಆ್ಯಂಕರ್ ಅನುಶ್ರೀ ಅವರು ಪುನೀತ್ ರಾಜ್ಕುಮಾರ್ ಅವರ ದೊಡ್ಡ ಅಭಿಮಾನಿ. ಅವರು ಇಂದು ನಮ್ಮ ಜೊತೆ ಇಲ್ಲದಿದ್ದರೂ ಬರ್ತ್ಡೇನ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಪುನೀತ್ ರಾಜ್ಕುಮಾರ್ ಬಗ್ಗೆ ಅನುಶ್ರೀ ಅವರು ಮಾತನಾಡಿದ್ದಾರೆ. ‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’ ಎಂದು ಅನುಶ್ರೀ ಅವರು ಹೇಳಿಕೊಂಡಿದ್ದಾರೆ .
ಪುನೀತ್ ರಾಜ್ಕುಮಾರ್ ಸಮಾಧಿ ಬಳಿ ಅಪಾರ ಅಭಿಮಾನಿಗಳು ನೆರೆದಿದ್ದಾರೆ. ಈ ಪೈಕಿ ಅನುಶ್ರೀ ಕೂಡ ಒಬ್ಬರು. ಅವರು ಪುನೀತ್ನ ದೊಡ್ಡ ಅಭಿಮಾನಿ. ಪುನೀತ್ ರಾಜ್ಕುಮಾರ್ ಬಗ್ಗೆ ಮಾತನಾಡಿದ ಅವರು, ‘ಕೋಟ್ಯಂತರ ಅಭಿಮಾನಿಗಳಲ್ಲಿ ನನ್ನನ್ನು ಗುರುತಿಸುತ್ತಿದ್ದಾರೆ. ಅವರ ಜನ್ಮದಿನಕ್ಕೆ ಕೇಕ್ ಕಟ್ ಮಾಡಿಸಿದ್ದೇನೆ. ಆ ಗುಣಕ್ಕೆ ಅಭಿಮಾನಿ. ಅದು ಅನ್ನ ಹಾಕಿದ ಕೈ. ಅವರಿಗೆ ಕೊಟ್ಟು ಅಭ್ಯಾಸವೇ ಹೊರತು, ತೆಗೆದುಕೊಂಡು ಅಭ್ಯಾಸ ಇಲ್ಲ’ ಎಂದಿದ್ದಾರೆ ಅನುಶ್ರೀ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Mar 17, 2025 02:18 PM