AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ

ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ

ರಾಜೇಶ್ ಹೆಗಡೆ ದುಗ್ಗುಮನೆ
|

Updated on: Feb 04, 2026 | 12:42 PM

Share

ಆ್ಯಂಕರ್ ಅನುಶ್ರೀ ಅವರು ಹಲವು ಶೋನಗಳನ್ನು ನಡೆಸಿಕೊಡುತ್ತಿದ್ದಾರೆ. ಇದರಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋ ಹೆಚ್ಚು ಗಮನ ಸೆಳೆದಿದೆ. ಈ ಶೋನಲ್ಲಿ ಗದಗದ ಪ್ರೀತಮ್ ಡ್ಯಾನ್ಸ್ ಮಾಡಿದ ರೀತಿಗೆ ಎಲ್ಲರೂ ಸುಸ್ತಾಗಿದ್ದಾರೆ. ಆ ಬಳಿಕ ಅವರು ಆಡಿದ ಮಾತು ಅನುಶ್ರೀ ಅವರನ್ನು ಕೂಡ ಸುಸ್ತು ಮಾಡಿದೆ. ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಗದಗದ ಪ್ರೀತಮ್ ಅವರು ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ಪ್ರೀತಮ್ ಮಾತನಾಡೋದನ್ನು ಕೇಳಿ ಅನುಶ್ರೀ ಅವರೇ ಸುಸ್ತಾಗಿ ಹೋಗಿದ್ದಾರೆ. ಪ್ರೀತಮ್ ಡ್ಯಾನ್ಸ್ ಅದ್ಭುತವಾಗಿತ್ತು. ಮಾತು ಕೂಡ ತುಂಬಾನೇ ಚೂಟಿ ಆಗಿತ್ತು. ಆ ವಿಡಿಯೋ ಮೇಲೆ ವೀಕ್ಷಣೆಗೆ ಲಭ್ಯವಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಬ್ಯಾಟಲ್ ರೌಂಡ್ ಈ ಶನಿವಾರ ಹಾಗೂ ಭಾನುವಾರ ರಾತ್ರಿ 7.30ಕ್ಕೆ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More