ಜೀ ಕನ್ನಡ ವೇದಿಕೆ ಮೇಲೆ ಅನುಶ್ರೀ ಮಡಿಲು ತುಂಬಿದ ತಾರಾ; ಮಗಳಂತೆ ಭಾವುಕ

Updated on: Sep 13, 2025 | 7:30 AM

ಜೀ ಕನ್ನಡ ವೇದಿಕೆ ಅನುಶ್ರೀ ಅವರನ್ನು ವಿಶೇಷ ಗೌರವದಿಂದ ನೋಡಿಕೊಳ್ಳುತ್ತದೆ. ಅನುಶ್ರೀ ಕೂಡ  ಜೀ ಕನ್ನ ವೇದಿಕೆ ಬಗ್ಗೆ ವಿಶೇಷ ಗೌರವ ಹೊಂದಿದ್ದಾರೆ. ಅವರು ಇಲ್ಲಿ ಮಾತ್ರ ಆ್ಯಂಕರಿಂಗ್ ಮಾಡೋದು. ಈಗ ಅವರ ಮಡಿಲು ತುಂಬೋ ಕೆಲಸ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ಅನುಶ್ರೀ (Anushree) ಅವರು ರೋಷನ್ ಜೊತೆ ವಿವಾಹ ಆಗಿದ್ದಾರೆ. ವಿವಾಹ ಆದ ಬಳಿಕ ಮೊದಲ ಬಾರಿಗೆ ಅವರು ಜೀ ಕನ್ನಡ ವೇದಿಕೆ ಏರಿದ್ದಾರೆ. ಈ ವೇಳೆ ತಾರಾ ಅವರು ಭಾವುಕರಾದರು. ಇಷ್ಟು ದಿನ ಮಗಳಾಗಿದ್ದವರು, ಪತಿ ಮನೆಗೆ ಹೋದ ಭಾವನೆ ಅವರಿಗೆ ಕಾಡಿದೆ. ಈ ಕಾರಣದಿಂದ ಅನುಶ್ರೀ ಅವರ ಮಡಿಲನ್ನು ತುಂಬಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More