ಲಕ್ಕುಂಡಿ: 4ನೇ ದಿನದ ಉತ್ಖನನ ವೇಳೆ ಪುರಾತನ ಕಾಲದ ಕೊಡಲಿ ಆಕಾರದ ಅವಶೇಷ ಪತ್ತೆ

Edited By:

Updated on: Jan 19, 2026 | 10:21 AM

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನದ ನಾಲ್ಕನೇ ದಿನ ಪುರಾತನ ಕಾಲದ ಕೊಡಲಿ ಆಕಾರದ ಅವಶೇಷವೊಂದು ಪತ್ತೆಯಾಗಿದೆ. ನೂರಾರು ವರ್ಷಗಳ ಇತಿಹಾಸ ಹೊಂದಿರುವ ಈ ಶಿಲೆಯು ಕುತೂಹಲ ಮೂಡಿಸಿದೆ. ಈ ಹಿಂದೆ ಶಿವಲಿಂಗ ಮತ್ತು ನಾಗರ ಚಿತ್ರದ ಅವಶೇಷಗಳು ದೊರೆತಿದ್ದು, ಉತ್ಖನನದಲ್ಲಿ ಇನ್ನಷ್ಟು ಪ್ರಾಚೀನ ವಸ್ತುಗಳು ಸಿಗುವ ನಿರೀಕ್ಷೆಯಿದೆ.

ಗದಗ, ಜನವರಿ 19: ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನದ ವೇಳೆ ಪುರಾತನ ಕಾಲದ ಕೊಡಲಿ ಆಕಾರದ ಅವಶೇಷವೊಂದು ಪತ್ತೆಯಾಗಿದೆ. ನೂರಾರು ವರ್ಷಗಳ ಇತಿಹಾಸ ಹೊಂದಿರುವ ಈ ಶಿಲೆಯು ಮೂರು ಅಡಿ ಆಳದಲ್ಲಿ ದೊರಕಿದೆ. ಈ ಹಿಂದೆ ಉತ್ಖನನದ ಮೊದಲ ದಿನ ಶಿವಲಿಂಗ ಪಾಣಿಪೀಠ ಮತ್ತು ನಿನ್ನೆ ಶಿವಲಿಂಗ ಹಾಗೂ ನಾಗರ ಚಿತ್ರವಿರುವ ಅವಶೇಷಗಳು ಪತ್ತೆಯಾಗಿದ್ದವು. ಲಕ್ಕುಂಡಿ ಗ್ರಾಮವು ಚಾಲುಕ್ಯರು ಮತ್ತು ರಾಷ್ಟ್ರಕೂಟರ ಕಾಲದ ಸುಮಾರು 101 ದೇವಸ್ಥಾನಗಳು ಮತ್ತು 101 ಭಾವಿಗಳನ್ನು ಹೊಂದಿದ್ದು, ಇದು ಐತಿಹಾಸಿಕ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ. ಪುರಾತತ್ವ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ನಾಲ್ಕರಿಂದ ಐದು ಅಡಿ ಆಳದಲ್ಲಿ ಇನ್ನಷ್ಟು ಪ್ರಮುಖ ಅವಶೇಷಗಳು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ದೊರೆತ ಕೊಡಲಿ ಆಕಾರದ ಅವಶೇಷವನ್ನು ಹೆಚ್ಚಿನ ಪರಿಶೀಲನೆಗಾಗಿ ವಶಕ್ಕೆ ಪಡೆಯಲಾಗಿದ್ದು, ಅದರ ಕಾಲಮಾನ ಮತ್ತು ಮಹತ್ವದ ಬಗ್ಗೆ ತಜ್ಞರು ನಿರ್ಧರಿಸಲಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More