ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ! ಮುತ್ತು, ಹವಳ, ನೀಲಮಣಿ ಸೇರಿ ಏನೇನು ಸಿಕ್ತು? ಇಲ್ಲಿದೆ ನೋಡಿ

Edited By:

Updated on: Jan 13, 2026 | 12:32 PM

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳ ನಿಧಿ ಪತ್ತೆಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಬಸಪ್ಪ ಬಡಿಗೇರ ಎಂಬವರಿಗೆ ಮುತ್ತು, ಹವಳ, ನೀಲಮಣಿ, ಸ್ಫಟಿಕ, ಬಿಳಿ ಹವಳ, ಕರಿಪುಕ್ಕಾ ಸೇರಿದಂತೆ ಹಲವು ಅಪರೂಪದ ವಸ್ತುಗಳು ದೊರೆತಿವೆ. ಈ ಹಿಂದೆ ಕೂಡ ಸಾಕಷ್ಟು ಪುರಾತನ ವಸ್ತುಗಳು ಅವರಿಗೆ ಸಿಕ್ಕಿದ್ದವು ಎನ್ನಲಾಗಿದ್ದು, ಇದೀಗ ಅಪರೂಪದ ವಸ್ತುಗಳು ಸಿಕ್ಕಿರುವ ವಿಡಿಯೋ ಇಲ್ಲಿದೆ.

ಗದಗ, ಜನವರಿ 13: ಅರ್ಧ ಕೆಜಿ ಚಿನ್ನಾಭರಣಗಳ ನಿಧಿ ಸಿಕ್ಕಿ ರಾಜ್ಯವೇ ಕುತೂಹಲದಿಂದ ನೋಡುವಂತಾಗಿರುವ ಗದಗದ ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು ಪತ್ತೆಯಾಗಿವೆ. ಗ್ರಾಮದ ಬಸಪ್ಪ ಬಡಿಗೇರ ಎಂಬವರಿಗೆ ಮುತ್ತು, ಹವಳ, ನೀಲಮಣಿ, ಸ್ಫಟಿಕ, ಬಿಳಿ ಹವಳ, ಕರಿಪುಕ್ಕಾ ಸೇರಿದಂತೆ ಹಲವು ವಸ್ತುಗಳುಳ್ಳ ನಿಧಿ ದೊರೆತಿದೆ. ಬಸಪ್ಪ ಬಡಿಗೇರ ಗ್ರಾಮದಲ್ಲಿ ಹಲವು ವರ್ಷಗಳಿಂದ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸಾಮಾನ್ಯವಾಗಿ ಮಳೆ ಬಂದ ನಂತರ ಗ್ರಾಮದಲ್ಲಿ ಶೋಧ ಮಾಡುತ್ತಾರೆ. ಈ ಹಿಂದೆ ಸಾಕಷ್ಟು ಪುರಾತನ ಕಾಲದ ವಸ್ತುಗಳು ಅವರಿಗೆ ಸಿಕ್ಕಿದ್ದವು ಎನ್ನಲಾಗಿದೆ. ಅವುಗಳನ್ನೆಲ್ಲ ಅವರು ಸರ್ಕಾರಕ್ಕೆ ಹಸ್ತಾಂತರ ಮಾಡಿದ್ದರು. ಇದೀಗ, ಲಕ್ಕುಂಡಿಯಲ್ಲಿ ಅಪಾರ ಚಿನ್ನ ಇದೆ ಎನ್ನುವ ನಂಬಿಕೆ ಬೆನ್ನಲ್ಲೇ ಪುರಾತನ ವಸ್ತುಗಳು ಪತ್ತೆಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More