Video: ಗ್ಯಾಸ್ ಸೋರಿಕೆಯಿಂದ ಆಟೋ ಸ್ಫೋಟ; ಭೀಕರ ಅಗ್ನಿ ಅವಘಡದ ಭಯಾನಕ ದೃಶ್ಯ ವೈರಲ್
ಗ್ಯಾಸ್ ಸೋರಿಕೆಯಾಗಿ ಆಟೋ ಸ್ಫೋಟಗೊಂಡಿದ್ದು, ಕೆಲ ಹೊತ್ತಿನಲ್ಲೇ ಆಟೋ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.
ಆಂಧ್ರಪ್ರದೇಶ: ಗ್ಯಾಸ್ ಸೋರಿಕೆಯಾಗಿ ಆಟೋ ಸ್ಫೋಟಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ಸಂಭವಿಸಿದೆ. ಇಲ್ಲಿನ ಪಿವಿಪಿ ಮಾಲ್ ಎದುರು ನಿಂತಿದ್ದ ಆಟೋದಲ್ಲಿ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ ಕೆಲ ಹೊತ್ತಿನಲ್ಲೇ ಆಟೋ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ತಕ್ಷಣ ಎಚ್ಚೆತ್ತ ಪೊಲೀಸರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆಟೋ ಸ್ಫೋಟದ ಹಿಂದಿನ ಕಾರಣಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸಂಪೂರ್ಣ ವಿವರ ತಿಳಿಯಬೇಕಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್ ಆಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: Assembly Session: ತಮ್ಮ ಕಾಲದ ಹಗರಣಗಳನ್ನು ಮುಚ್ಚಿಹಾಕಲು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ: ಡಿಕೆ ಶಿವಕುಮಾರ್