International Yoga day: ಪ್ರಧಾನಿ ಮೋದಿಯವರೊಂದಿಗೆ ಕಾರ್ಯಕ್ರಮದಲ್ಲಿ ಭಾಗಿಯಾದ ನಾಯ್ಡು, ಪವನ್ ಕಲ್ಯಾಣ್
ಯೋಗದ ಮಹತ್ವವನ್ನು ವಿಶ್ವಕ್ಕೆ ಸಾರಿದ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ಕಾರ್ಯಕ್ರಮದ ನಂತರ ಡಿಸಿಎಂ ಪವನ್ ಕಲ್ಯಾಣ್ ಹೇಳಿದರು. ವಿಶಾಳಪಟ್ಟಣಂನ ರಾಮಕೃಷ್ಣ ಬೀಚ್ನಿಂದ ಭೋಗಾಪುರಂವರಗೆ ಸುಮಾರು 26 ಕಿಮೀ ಅಂತರದವರೆಗೆ ಯೋಗಕ್ಕಾಗಿ ವ್ಯವಸ್ಥೆ ಮಾಡಿದ್ದ ಸ್ಥಳದಲ್ಲಿ ಸುಮಾರು 5 ಲಕ್ಷ ಜನ ಭಾಗಿಯಾಗಿ ಪ್ರಧಾನಿಯವರೊಂದಿಗೆ ಯೋಗ ಮಾಡಿದರು.
ವಿಶಾಖಪಟ್ಟಣಂ, (ಆಂದ್ರಪ್ರದೇಶ) ಜೂನ್ 21: ಇಂದು 11ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ದೇಶದ ಮೂಲೆಮಲೆಗಳಲ್ಲಿ ಯೋಗ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಆಚರಿಸಲಾಯಿತು ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಖುದ್ದು ವಿಶಾಖಪಟ್ಟಣಂನಲ್ಲಿ ನಡೆದ ಬೃಹತ್ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇಶವನ್ನು ಈ ಮಹತ್ವದ ದಿನದೆಡೆ ಮುನ್ನೆಡೆಸಿದರು. ಆಂದ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಕಾರ್ಯಕ್ರಮದಲ್ಲಿ ಭಾಗಿಯಾದರು. ಯೋಗದ ವಿವಿಧ ಆಸನಗಳ ನಂತರ ಪ್ರಧಾನಿ ಮೋದಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡವರೊಂದಿಗೆ ಮಾತುಕತೆ ನಡೆಸಿದರು.
ಇದನ್ನೂ ಓದಿ: ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ; ಈ ವರ್ಷದ ಥೀಮ್ ಏನು?
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Latest Videos