ಪತ್ನಿ, ಮಗನೊಂದಿಗೆ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್
ಈಗಾಗಲೇ ವರದಿ ಮಾಡಿರುವಂತೆ ಜನವರಿ 13ರಂದು ಆರಂಭಗೊಂಡಿರುವ ಮಹಾ ಕುಂಭಮೇಳ ಫೆಬ್ರುವರಿ 26ರಂದು ಮಹಾಶಿವರಾತ್ರಿಯೊಂದಿಗೆ ಸಂಪನ್ನಗೊಳ್ಳಲಿದೆ. ತ್ರಿವೇಣಿ ಸಂಗಮದಲ್ಲಿ ಇದುವರೆಗೆ 50 ಕೋಟಿಗೂ ಅಧಿಕ ಜನ ಪುಣ್ಯ ಸ್ನಾನ ಮಾಡಿರುವರೆಂದು ಅಂದಾಜಿಸಲಾಗಿದೆ. ಕುಂಭಮೇಳ ಕೊನೆಗೊಳ್ಳಲು ಇನ್ನೂ ಒಂದು ವಾರ ಕಾಲಾವಕಾಶ ಇರೋದ್ರಿಂದ ಭಕ್ತಾದಿಗಳ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ.
ಪ್ರಯಾಗ್ರಾಜ್ (ಉತ್ತರ ಪ್ರದೇಶದ): ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭ ಮೇಳ ಈಗಲೂ ಜಾರಿಯಲ್ಲಿದೆ ಮತ್ತು ಗಣ್ಯರು ಇಲ್ಲಿಗೆ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡುವುದು ಮುಂದುವರಿದಿದೆ. ಇವತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಮ್ಮ ಕುಟುಂಬದೊಂದಿಗೆ ತೆರಳಿ ಪುಣ್ಯಸ್ನಾನ ಮಾಡಿದರು. ಸಾಯಂಕಾಲ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ತಮ್ಮ ಪತ್ನಿ ರಷ್ಯಾ ಮೂಲದ ಆ್ಯನಾ ಲೆಜ್ನೀವಾ ಹಾಗೂ ಮಗ ಅಕಿರಾ ನಂದನ್ ಜೊತೆ ಕುಂಭಮೇಳದಲ್ಲಿ ಭಾಗಿಯಾಗಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮಹಾಕುಂಭಮೇಳದಲ್ಲಿ ವಿಜಯೇಂದ್ರನೂ ಭಾಗಿ, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ
Latest Videos

