ಪತ್ನಿ, ಮಗನೊಂದಿಗೆ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್

ಅರುಣ್​ ಕುಮಾರ್​ ಬೆಳ್ಳಿ

Updated on: Feb 18, 2025 | 8:17 PM

ಈಗಾಗಲೇ ವರದಿ ಮಾಡಿರುವಂತೆ ಜನವರಿ 13ರಂದು ಆರಂಭಗೊಂಡಿರುವ ಮಹಾ ಕುಂಭಮೇಳ ಫೆಬ್ರುವರಿ 26ರಂದು ಮಹಾಶಿವರಾತ್ರಿಯೊಂದಿಗೆ ಸಂಪನ್ನಗೊಳ್ಳಲಿದೆ. ತ್ರಿವೇಣಿ ಸಂಗಮದಲ್ಲಿ ಇದುವರೆಗೆ 50 ಕೋಟಿಗೂ ಅಧಿಕ ಜನ ಪುಣ್ಯ ಸ್ನಾನ ಮಾಡಿರುವರೆಂದು ಅಂದಾಜಿಸಲಾಗಿದೆ. ಕುಂಭಮೇಳ ಕೊನೆಗೊಳ್ಳಲು ಇನ್ನೂ ಒಂದು ವಾರ ಕಾಲಾವಕಾಶ ಇರೋದ್ರಿಂದ ಭಕ್ತಾದಿಗಳ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ.

ಪ್ರಯಾಗ್​ರಾಜ್ (ಉತ್ತರ ಪ್ರದೇಶದ): ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭ ಮೇಳ ಈಗಲೂ ಜಾರಿಯಲ್ಲಿದೆ ಮತ್ತು ಗಣ್ಯರು ಇಲ್ಲಿಗೆ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡುವುದು ಮುಂದುವರಿದಿದೆ. ಇವತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಮ್ಮ ಕುಟುಂಬದೊಂದಿಗೆ ತೆರಳಿ ಪುಣ್ಯಸ್ನಾನ ಮಾಡಿದರು. ಸಾಯಂಕಾಲ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ತಮ್ಮ ಪತ್ನಿ ರಷ್ಯಾ ಮೂಲದ ಆ್ಯನಾ ಲೆಜ್ನೀವಾ ಹಾಗೂ ಮಗ ಅಕಿರಾ ನಂದನ್ ಜೊತೆ ಕುಂಭಮೇಳದಲ್ಲಿ ಭಾಗಿಯಾಗಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮಹಾಕುಂಭಮೇಳದಲ್ಲಿ ವಿಜಯೇಂದ್ರನೂ ಭಾಗಿ, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.