Video: ಬೈಕ್ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಲಾರಿಯೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ದುರಂತ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಮನಕಲಕುವ ವೀಡಿಯೊ ಆನ್‌ಲೈನ್‌ನಲ್ಲಿಯೂ ವೈರಲ್ ಆಗಿದೆ. ಭಾರೀ ವಾಹನದ ಮುಂದೆ ಇದ್ದಕ್ಕಿದ್ದಂತೆ ಬಂದ ಬೈಕನ್ನು ತಪ್ಪಿಸಲು ಲಾರಿ ಚಾಲಕ ವಾಹನವನ್ನು ಬಲಕ್ಕೆ ತಿರುಗಿಸಿದ್ದಾನೆ. ಆಗ ಕಾರಿಗೆ ಡಿಕ್ಕಿ ಹೊಡೆದಿದೆ. ಜಿಲ್ಲೆಯ ಕೊರ್ಲಂ ಗ್ರಾಮದ ಬಳಿಯ ಬರುವಾ ಜಂಕ್ಷನ್‌ನಲ್ಲಿ ಈ ಅಪಘಾತ ಸಂಭವಿಸಿದೆ.
ಶ್ರೀಕಾಕುಳಂ, ಜನವರಿ 08: ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಲಾರಿಯೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ದುರಂತ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಮನಕಲಕುವ ವೀಡಿಯೊ ವೈರಲ್ ಆಗಿದೆ. ಭಾರೀ ವಾಹನದ ಮುಂದೆ ಇದ್ದಕ್ಕಿದ್ದಂತೆ ಬಂದ ಬೈಕನ್ನು ತಪ್ಪಿಸಲು ಲಾರಿ ಚಾಲಕ ವಾಹನವನ್ನು ಬಲಕ್ಕೆ ತಿರುಗಿಸಿದ್ದಾನೆ. ಆಗ ಕಾರಿಗೆ ಡಿಕ್ಕಿ ಹೊಡೆದಿದೆ. ಜಿಲ್ಲೆಯ ಕೊರ್ಲಂ ಗ್ರಾಮದ ಬಳಿಯ ಬರುವಾ ಜಂಕ್ಷನ್‌ನಲ್ಲಿ ಈ ಅಪಘಾತ ಸಂಭವಿಸಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us