ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಇದೀಗ ಎಲ್ಲೆಡೆ ವೈರಲ್ ಆಗಿರುವ ವಿಡಿಯೋದಲ್ಲಿ ಆಂಧ್ರಪ್ರದೇಶದಲ್ಲಿ ಪುರುಷನು ತನ್ನ ಗರ್ಭಿಣಿ ಹೆಂಡತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ತುಂಬಿ ಹರಿಯುವ ನಾಲೆಯ ಮೇಲೆ ನಡೆಯುತ್ತಿದ್ದಾನೆ. ತುಂಬು ಗರ್ಭಿಣಿಯನ್ನು ಆ ರೀತಿ ನದಿಯಲ್ಲಿ ಹೊತ್ತುಕೊಂಡು ಹೋಗುವುದು ಅಪಾಯಕಾರಿ ಎಂಬುದು ಗೊತ್ತಿದ್ದರೂ ಆಕೆಯನ್ನು ಆಸ್ಪತ್ರೆಗೆ ಸೇರಿಸದಿದ್ದರೆ ಹೆರಿಗೆಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಆಕೆಯ ಗಂಡ ಈ ಸಾಹಸಕ್ಕೆ ಕೈ ಹಾಕಿದ್ದಾನೆ.
ಹೈದರಾಬಾದ್: ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದ ಘಟನೆಯ ವಿಡಿಯೋವೊಂದು ವೈರಲ್ ಆಗಿದ್ದು, ತುಂಬಿ ಹರಿಯುತ್ತಿರುವ ಅಣೆಕಟ್ಟಿನ ಮೇಲೆ ಗರ್ಭಿಣಿಯನ್ನು ಹೊತ್ತುಕೊಂಡು ಆಕೆಯ ಗಂಡ ಹೊಳೆ ದಾಟುತ್ತಿದ್ದಾನೆ. ಬುಡಕಟ್ಟು ವ್ಯಕ್ತಿಯೊಬ್ಬ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದನ್ನು ನೋಡಿದ ವಿಡಿಯೋವೊಂದು ವೈರಲ್ ಆಗಿದ್ದು, ಇನ್ನೂ ಕೆಲವರು ಅವರಿಗೆ ಸಹಾಯ ಮಾಡುತ್ತಿದ್ದಾರೆ. ವೈರಲ್ ಆಗಿರುವ ವಿಡಿಯೋ ನೆಟ್ಟಿಗರನ್ನು ಕೆರಳಿಸಿದೆ. ಆ ಊರಿಗೆ ಬೇರೆ ದಾರಿಯೇ ಇಲ್ಲದ ಕಾರಣ ಗರ್ಭಿಣಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುವ ಪರಿಸ್ಥಿತಿ ಉಂಟಾಗಿತ್ತು.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos