ಆಂಧ್ರದಲ್ಲಿ ರೌಡಿ ಶೀಟರ್‌ಗಳನ್ನು ಹಿಡಿದು ಸ್ಥಳದಲ್ಲೇ ಲಾಠಿಯೇಟು ಕೊಟ್ಟ ಪೊಲೀಸರು

Updated on: May 26, 2025 | 10:11 PM

ಆಂಧ್ರಪ್ರದೇಶದಲ್ಲಿ ಪೊಲೀಸರು ಸಾರ್ವಜನಿಕವಾಗಿ ಆರೋಪಿಗಳನ್ನು ಹಿಡಿದು, ರಸ್ತೆಯ ಮಧ್ಯದಲ್ಲೇ ಅವರಿಗೆ ಲಾಠಿಯೇಟು ನೀಡುತ್ತಿರುವ ವಿಡಿಯೋ ವಿವಾದಕ್ಕೆ ಕಾರಣವಾಗಿದೆ. ಸ್ಥಳೀಯ ಮಾನವ ಹಕ್ಕುಗಳ ಗುಂಪುಗಳು ಈ ಘಟನೆಯನ್ನು ಖಂಡಿಸಿವೆ. ಪೊಲೀಸರು ಕಾನ್‌ಸ್ಟೆಬಲ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಹೈದರಾಬಾದ್, ಮೇ 26: ಆಂಧ್ರಪ್ರದೇಶದ (Andhra Pradesh) ಗುಂಟೂರು ಜಿಲ್ಲೆಯ ಐತಾನಗರದಲ್ಲಿ ಕಾನ್‌ಸ್ಟೆಬಲ್ ಚಿರಂಜೀವಿ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ತೆನಾಲಿ ಟೂ ಟೌನ್ ಪೊಲೀಸರು ಮೂವರು ರೌಡಿ ಶೀಟರ್‌ಗಳಾದ ವಿಕ್ಟರ್, ಬಾಬುಲಾಲ್ ಮತ್ತು ರಾಕೇಶ್ ಅವರನ್ನು ಬಂಧಿಸಿದ್ದಾರೆ. ಈ ಘಟನೆ ಕೆಲವು ತಿಂಗಳುಗಳ ಹಿಂದೆ ನಡೆದಿದ್ದು, ಗಾಂಜಾ ಸೇವಿಸಿದ್ದ ಆರೋಪಿಗಳು ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ್ದರು. ಆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಪೊಲೀಸರು ಸಾರ್ವಜನಿಕವಾಗಿ ಆರೋಪಿಗಳಿಗೆ ಲಾಠಿಯಿಂದ ಹೊಡೆದು ಶಿಕ್ಷೆ ನೀಡಿರುವ ವಿಡಿಯೋ ವಿವಾದಕ್ಕೆ ಕಾರಣವಾಗಿದ್ದು, ಸ್ಥಳೀಯ ಮಾನವ ಹಕ್ಕುಗಳ ಗುಂಪುಗಳು ಈ ಘಟನೆಯನ್ನು ಖಂಡಿಸಿವೆ. ಪೊಲೀಸರು ಕಾನ್‌ಸ್ಟೆಬಲ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More