ಆಂಧ್ರದಲ್ಲಿ ಟಿಡಿಪಿ-ವೈಎಸ್‌ಆರ್‌ಸಿಪಿ ಕಾರ್ಯಕರ್ತರ ನಡುವೆ ಹಿಂಸಾಚಾರ; ಹಲವು ವಾಹನಗಳಿಗೆ ಬೆಂಕಿ

Updated on: Oct 16, 2026 | 4:33 PM

ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಇಂದು ಆಡಳಿತಾರೂಢ ಟಿಡಿಪಿ ಮತ್ತು ವಿರೋಧ ಪಕ್ಷವಾದ ವೈಎಸ್​​ಆರ್​ಸಿಪಿ ಕಾರ್ಯಕರ್ತರ ನಡುವೆ ಭಾರಿ ಗಲಾಟೆ ನಡೆದಿದ್ದು, ಹಿಂಸಾಚಾರಕ್ಕೆ ತಿರುಗಿದೆ. ಈ ಘಟನೆಯಲ್ಲಿ ಹಲವು ವಾಹನಗಳನ್ನು ತಡೆದು ಬೆಂಕಿ ಹಚ್ಚಲಾಗಿದೆ. ಟಿಡಿಪಿ ಹಾಗೂ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ಪರಸ್ಪರ ದಾಳಿ ನಡೆಸಿಕೊಳ್ಳುತ್ತಿರುವ ವೀಡಿಯೋ ಮತ್ತು ಉದ್ವಿಗ್ನ ಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಪರದಾಡುತ್ತಿರುವ ದೃಶ್ಯಗಳು ಜಾಲತಾಣಗಳಲ್ಲಿ ವೈರಲ್ ಆಗಿವೆ. ಟಿಡಿಪಿ ಕಾರ್ಯಕರ್ತರು ತಮ್ಮ ಕಾರುಗಳ ಮೇಲೆ ಕಲ್ಲು ತೂರಿದ್ದಾರೆ, ದೊಣ್ಣೆಗಳಿಂದ ದಾಳಿ ಮಾಡಿದ್ದಾರೆ. ಬಳಿಕ ಪುಂಗನೂರಿನಲ್ಲಿರುವ ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ.

ಅಮರಾವತಿ, ಅಕ್ಟೋಬರ್ 16: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಇಂದು ಆಡಳಿತಾರೂಢ ಟಿಡಿಪಿ ಮತ್ತು ವಿರೋಧ ಪಕ್ಷವಾದ ವೈಎಸ್​​ಆರ್​ಸಿಪಿ ಕಾರ್ಯಕರ್ತರ ನಡುವೆ ಭಾರಿ ಗಲಾಟೆ ನಡೆದಿದ್ದು, ಹಿಂಸಾಚಾರಕ್ಕೆ ತಿರುಗಿದೆ. ಈ ಘಟನೆಯಲ್ಲಿ ಹಲವು ವಾಹನಗಳನ್ನು ತಡೆದು ಬೆಂಕಿ ಹಚ್ಚಲಾಗಿದೆ. ಟಿಡಿಪಿ ಹಾಗೂ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ಪರಸ್ಪರ ದಾಳಿ ನಡೆಸಿಕೊಳ್ಳುತ್ತಿರುವ ವೀಡಿಯೋ ಮತ್ತು ಉದ್ವಿಗ್ನ ಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಪರದಾಡುತ್ತಿರುವ ದೃಶ್ಯಗಳು ಜಾಲತಾಣಗಳಲ್ಲಿ ವೈರಲ್ ಆಗಿವೆ. ಟಿಡಿಪಿ ಕಾರ್ಯಕರ್ತರು ತಮ್ಮ ಕಾರುಗಳ ಮೇಲೆ ಕಲ್ಲು ತೂರಿದ್ದಾರೆ, ದೊಣ್ಣೆಗಳಿಂದ ದಾಳಿ ಮಾಡಿದ್ದಾರೆ. ಬಳಿಕ ಪುಂಗನೂರಿನಲ್ಲಿರುವ ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ.

ಆಂಧ್ರಪ್ರದೇಶ ರಾಜ್ಯ ಚುನಾವಣಾ ಆಯೋಗ ತಕ್ಷಣವೇ ಪ್ರವೇಶಿಸಿ, ದಾಳಿಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಬಂಧಿಸುವಂತೆ ಪೊಲೀಸರಿಗೆ ಸೂಚಿಸಬೇಕು ಮತ್ತು ದಾಳಿಯನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪಕ್ಷ ಆಗ್ರಹಿಸಿದೆ. ಆಂಧ್ರಪ್ರದೇಶದ 100 ನಗರ ಸ್ಥಳೀಯ ಸಂಸ್ಥೆಗಳಿಗೆ ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 30ರಂದು ಮತ ಎಣಿಕೆ ನಡೆಯಲಿದೆ.

ಎಂಪಿಟಿಸಿ ಮತ್ತು ಜಿಪಿಟಿಸಿ ಚುನಾವಣೆಗಳಿಗೆ ಅಕ್ಟೋಬರ್ 19ರಂದು ಅಧಿಸೂಚನೆ ಹೊರಬೀಳಲಿದ್ದು, ನವೆಂಬರ್ 5ರಂದು ಮತ ಎಣಿಕೆ ಪೂರ್ಣಗೊಳ್ಳಲಿವೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More