AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ; ವಿಡಿಯೋ ವೈರಲ್

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ; ವಿಡಿಯೋ ವೈರಲ್

ಸುಷ್ಮಾ ಚಕ್ರೆ
|

Updated on: Mar 13, 2025 | 10:08 PM

Share

ವಿಜಯನಗರದಲ್ಲಿ ಕುಡಿದ ಅಮಲಿನಲ್ಲಿದ್ದ ಆಂಧ್ರಪ್ರದೇಶದ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಕುಡಿದ ಅಮಲಿನಲ್ಲಿದ್ದ ಯುವಕರು ಹಲ್ಲೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ 9 ಮಂದಿಯನ್ನು ಬಂಧಿಸಲಾಗಿದೆ. ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಘಟನೆಯ ವೀಡಿಯೊದಲ್ಲಿ ದುಷ್ಕರ್ಮಿಗಳು ಆಕೆಯ ಕೂದಲನ್ನು ಎಳೆದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದು ಕಂಡುಬಂದಿದೆ. ಅಧಿಕಾರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ವಿಜಯನಗರ, (ಮಾರ್ಚ್ 13): ಆಂಧ್ರಪ್ರದೇಶದ ವಿಜಯನಗರದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ಬಿ. ದೇವಿ ಅವರ ಮೇಲೆ ಕುಡಿದ ಅಮಲಿನಲ್ಲಿದ್ದ ಯುವಕರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಇದಾದ ನಂತರ 9 ಆರೋಪಿಗಳನ್ನು ಆಂಧ್ರಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ದುಷ್ಕರ್ಮಿಗಳು ಗಾಂಜಾದ ಪ್ರಭಾವದಲ್ಲಿದ್ದರು ಎನ್ನಲಾಗಿದೆ. ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಘಟನೆಯ ವೀಡಿಯೊದಲ್ಲಿ ಆ ಯುವಕರು ಆಕೆಯ ಕೂದಲನ್ನು ಎಳೆದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದನ್ನು ನೋಡಬಹುದು. ಅಧಿಕಾರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More