ಇಂಟರ್ನ್ಯಾಷನಲ್ ಟಿ20 ಲೀಗ್ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
Desert Vipers vs MI Emirates: ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಡೆಸರ್ಟ್ ವೈಪರ್ಸ್ ಪರ ಇನಿಂಗ್ಸ್ ಆರಂಭಿಸಿದ ಆಂಡ್ರೀಸ್ ಗೌಸ್ 58 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ ಅಜೇಯ 120 ರನ್ ಬಾರಿಸಿದರು.
ಅಬುಧಾಬಿಯಲ್ಲಿ ನಡೆದ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಂಡ್ರೀಸ್ ಗೌಸ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಶೇಖ್ ಝಾಯೆದ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಡೆಸರ್ಟ್ ವೈಪರ್ಸ್ ಹಾಗೂ ಎಂಐ ಎಮಿರೇಟ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಡೆಸರ್ಟ್ ವೈಪರ್ಸ್ ಪರ ಇನಿಂಗ್ಸ್ ಆರಂಭಿಸಿದ ಆಂಡ್ರೀಸ್ ಗೌಸ್ 58 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ ಅಜೇಯ 120 ರನ್ ಬಾರಿಸಿದರು.
ಈ ಮೂಲಕ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿ ಇತಿಹಾಸದಲ್ಲೇ ಗರಿಷ್ಠ ವೈಯುಕ್ತಿಕ ಸ್ಕೋರ್ಗಳಿಸಿದ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಅಲೆಕ್ಸ್ ಹೇಲ್ಸ್ ಹೆಸರಿನಲ್ಲಿತ್ತು. 2023 ರಲ್ಲಿ ಹೇಲ್ಸ್ 110 ರನ್ಗಳಿಸಿದ್ದು ಈವರೆಗಿನ ದಾಖಲೆಯಾಗಿತ್ತು.
ಇದೀಗ 120 ರನ್ಗಳೊಂದಿಗೆ ಆಂಡ್ರೀಸ್ ಗೌಸ್ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಡೆಸರ್ಟ್ ವೈಪರ್ಸ್ ತಂಡವು 20 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು 233 ರನ್ ಕಲೆಹಾಕಿತು.
ಈ ಕಠಿಣ ಗುರಿ ಬೆನ್ನತ್ತಿದ ಎಂಐ ಎಮಿರೇಟ್ಸ್ ತಂಡವು 20 ಓವರ್ಗಳಲ್ಲಿ 188 ರನ್ಗಳಿಸಿ 45 ರನ್ಗಳಿಂದ ಸೋಲೊಪ್ಪಿಕೊಂಡಿದೆ. ಈ ಗೆಲುವಿನೊಂದಿಗೆ ಡೆಸರ್ಟ್ ವೈಪರ್ಸ್ ತಂಡವು ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಫೈನಲ್ಗೆ ಪ್ರವೇಶಿಸಿದೆ.
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್ಐಟಿಯಿಂದ ಹೈವೋಲ್ಟೇಜ್ ಸಭೆ

